ADVERTISEMENT

ಷೇರುಪೇಟೆ: 4 ವಾರಗಳ ಗರಿಷ್ಠ ಮಟ್ಟಕ್ಕೆ ವಹಿವಾಟು

ಪಿಟಿಐ
Published 30 ಮೇ 2022, 15:32 IST
Last Updated 30 ಮೇ 2022, 15:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದೇಶದ ಷೇರುಪೇಟೆಗಳು ಸೋಮವಾರದ ವಹಿವಾಟಿನಲ್ಲಿ ಶೇಕಡ 2ರವರೆಗೂ ಏರಿಕೆ ಕಂಡವು. ರಿಲಯನ್ಸ್‌ ಇಂಡಸ್ಟ್ರೀಸ್‌, ಇನ್ಫೊಸಿಸ್‌ ಮತ್ತು ಟಿಸಿಎಸ್‌ ಕಂಪನಿಗಳ ಷೇರುಗಳ ಉತ್ತಮ ಗಳಿಕೆಯಿಂದ ಸತತ ಮೂರನೇ ದಿನವೂ ಸಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 1,041 ಅಂಶ ಹೆಚ್ಚಾಗಿ ನಾಲ್ಕು ವಾರಗಳ ಗರಿಷ್ಠ ಮಟ್ಟವಾದ 55,925 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 309 ಅಂಶ ಹೆಚ್ಚಾಗಿ 16,661 ಅಂಶಗಳಿಗೆ ಏರಿಕೆ ಕಂಡಿತು.

ಹಣದುಬ್ಬರದ ಕುರಿತ ಕಳವಳವು ಅಮೆರಿಕದಲ್ಲಿ ತುಸು ತಗ್ಗಿರುವ ಕಾರಣ ಅಲ್ಲಿನ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು. ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ನ ಮುಂಬರುವ ಸಭೆಯ ನಿರ್ಧಾರಗಳು ಹಣದುಬ್ಬರದ ಮೇಲೆ ಅವಲಂಬಿತವಾಗಿವೆ. ಇದರ ಜೊತೆಗೆ ಚೀನಾದಲ್ಲಿ ಲಾಕ್‌ಡೌನ್‌ ನಿರ್ಬಂಧ ಸಡಿಲ ಮಾಡಿರುವುದು ಸಹ ಏಷ್ಯಾದ ಷೇರುಪೇಟೆಗಳಲ್ಲಿ ಸೂಚ್ಯಂಕಗಳ ಏರಿಕೆಗೆ ಕಾರಣವಾಗಿವೆ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.43ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 119.9 ಡಾಲರ್‌ಗಳಿಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.