ADVERTISEMENT

ತೈಲ, ಬ್ಯಾಂಕಿಂಗ್ ಷೇರು ಗಳಿಕೆ: ಸೂಚ್ಯಂಕ 491 ಅಂಶ ಏರಿಕೆ

ಪಿಟಿಐ
Published 17 ಅಕ್ಟೋಬರ್ 2022, 11:36 IST
Last Updated 17 ಅಕ್ಟೋಬರ್ 2022, 11:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡುಬಂದ ಚೇತರಿಕೆಯಿಂದಾಗಿ ದೇಶದ ಷೇರುಪೇಟೆಗಳಲ್ಲಿಯೂ ಸೋಮವಾರ ಸಕಾರಾತ್ಮಕ ವಹಿವಾಟು ನಡೆಯಿತು.

ರಿಲಯನ್ಸ್‌ ಇಂಡಸ್ಟ್ರೀಸ್‌, ಐಸಿಐಸಿಐ ಬ್ಯಾಂಕ್‌ ಷೇರುಗಳ ಮಾರಾಟ ಹೆಚ್ಚಾಗಿದ್ದುದು ಸೂಚ್ಯಂಕಗಳ ಏರಿಕೆಗೆ ನೆರವಾಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 491 ಅಂಶ ಏರಿಕೆ ಕಂಡು 58,410 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 126 ಅಂಶ ಹೆಚ್ಚಾಗಿ 17,311 ಅಂಶಗಳಿಗೆ ಏರಿಕೆ ಕಂಡಿತು.

ADVERTISEMENT

ಸೆನ್ಸೆಕ್ಸ್‌ನಲ್ಲಿ ಎಸ್‌ಬಿಐ, ಎನ್‌ಟಿಪಿಸಿ, ಬಜಾಜ್‌ ಫಿನ್‌ಸರ್ವ್, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಇಂಡಸ್‌ಇಂಡ್ ಬ್ಯಾಂಕ್ ಷೇರುಗಳ ಮೌಲ್ಯ ಹೆಚ್ಚಾಯಿತು.

ಏಷ್ಯಾದಲ್ಲಿ, ಸೋಲ್‌, ಶಾಂಘೈ ಮತ್ತು ಹಾಂಗ್‌ಕಾಂಗ್ ಷೇರುಪೇಟೆಗಳು ಗಳಿಕೆ ಕಂಡರೆ, ಟೋಕಿಯೊ ಷೇರುಪೇಟೆ ವಹಿವಾಟು ಇಳಿಕೆಯಾಯಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.07ರಷ್ಟು ಇಳಿಕೆ ಕಂಡು ಒಂದು ಬ್ಯಾರಲ್‌ಗೆ 91.57 ಡಾಲರ್‌ಗೆ ತಲುಪಿತು.

ರೂಪಾಯಿ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 11 ಪೈಸೆ ಇಳಿಕೆ ಕಂಡಿದ್ದು ಒಂದು ಡಾಲರ್‌ಗೆ ₹ 82.30ರಂತೆ (ತಾತ್ಕಾಲಿಕ ಮಾಹಿತಿ) ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.