ADVERTISEMENT

ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್, ನಿಫ್ಟಿ

ಪಿಟಿಐ
Published 25 ನವೆಂಬರ್ 2022, 16:16 IST
Last Updated 25 ನವೆಂಬರ್ 2022, 16:16 IST
   

ಮುಂಬೈ: ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಶುಕ್ರವಾರ ಏರಿಕೆ ಕಂಡು, ದಾಖಲೆಯ ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿವೆ.

ಸೆನ್ಸೆಕ್ಸ್ 62,293 ಅಂಶಗಳಲ್ಲಿ ಹಾಗೂ ನಿಫ್ಟಿ 18,512 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿವೆ. ‘ದೇಶಿ ಮಾರುಕಟ್ಟೆಗಳು ಇತರ ಮಾರುಕಟ್ಟೆಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಏರಿಕೆ ಕಾಣುವುದನ್ನು ಮುಂದುವರಿಸಲಿವೆ ಎಂಬುದು ನಮ್ಮ ನಂಬಕೆ’ ಎಂದು ಹೆಮ್‌ ಸೆಕ್ಯುರಿಟೀಸ್‌ನ ನಿಧಿ ನಿರ್ವಾಹಕ ಮೋಹಿತ್ ನಿಗಮ್ ಹೇಳಿದ್ದಾರೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಶುಕ್ರವಾರದ ವಹಿವಾಟಿನಲ್ಲಿ ₹ 369 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.