ಮುಂಬೈ: ದೇಶದ ಷೇರುಪೇಟೆಯಲ್ಲಿ ಮಂಗಳವಾರ ಕರಡಿ ಕುಣಿತದಿಂದಾಗಿ ಸೂಚ್ಯಂಕಗಳು ಇಳಿಕೆ ಕಂಡಿವೆ.
ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಎಚ್‌ಡಿಎಫ್‌ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್‌ನ ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಮಾರುಕಟ್ಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು. ಇದರಿಂದ ಹೂಡಿಕೆದಾರರ ಸಂಪತ್ತು ₹5.64 ಲಕ್ಷ ಕೋಟಿ ಕರಗಿದೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 872 ಅಂಶ ಇಳಿಕೆ ಕಂಡು (ಶೇ 1.06) 81,186 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 261 ಅಂಶ ಇಳಿಕೆ ಕಂಡು (ಶೇ 1.05), 24,683 ಅಂಶಗಳಲ್ಲಿ ಮುಕ್ತಾಯಗೊಂಡಿತು.
ಎಟರ್ನಲ್ ಷೇರಿನ ಮೌಲ್ಯದಲ್ಲಿ ಶೇ 4.10ರಷ್ಟು ಇಳಿಕೆಯಾಗಿದೆ. ಮಾರುತಿ, ಮಹೀಂದ್ರ ಆ್ಯಂಡ್ ಮಹೀಂದ್ರ, ಅಲ್ಟ್ರಾಟೆಕ್ ಸಿಮೆಂಟ್, ಪವರ್ ಗ್ರಿಡ್, ನೆಸ್ಲೆ, ಬಜಾಜ್ ಫೈನಾನ್ಸ್, ಎಚ್‌ಯುಎಲ್, ಏಷ್ಯನ್ ಪೇಂಟ್ಸ್, ಎಚ್‌ಡಿಎಫ್‌ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಟಾಟಾ ಸ್ಟೀಲ್, ಇನ್ಫೊಸಿಸ್, ಐಟಿಸಿ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.