ADVERTISEMENT

ಮಾರಾಟದ ಒತ್ತಡಕ್ಕೆ ಸೂಚ್ಯಂಕ ಇಳಿಕೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 20:00 IST
Last Updated 13 ಫೆಬ್ರುವರಿ 2019, 20:00 IST
sensex
sensex   

ಮುಂಬೈ (ಪಿಟಿಐ): ಮುಂಬೈ ಷೇರುಪೇಟೆಯಲ್ಲಿ ಸತತ ನಾಲ್ಕನೇ ವಹಿವಾಟು ಅವಧಿಯಲ್ಲಿಯೂ ಮಾರಾಟದ ಒತ್ತಡ ಮುಂದುವರಿಯಿತು.

ದೇಶಿ ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಗಮನ ನೀಡಿದರು. ಇದರಿಂದವಾಹನ, ಬ್ಯಾಂಕ್‌, ಲೋಹ ಮತ್ತು ಔಷಧ ವಲಯದ ಷೇರುಗಳು ನಷ್ಟ ಅನುಭವಿಸಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 119 ಅಂಶ ಇಳಿಕೆ ಕಂಡು, 36,034 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 38ಅಂಶ ಇಳಿಕೆಯಾಗಿ 10,793 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರೂಪಾಯಿ ಇಳಿಕೆ: ಕರೆನ್ಸಿವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರುರೂಪಾಯಿ ಮೌಲ್ಯ ಬುಧವಾರ 10 ಪೈಸೆ ಇಳಿಕೆಯಾಗಿ ಒಂದು ಡಾಲರ್‌ಗೆ ₹ 70.80ರಂತೆ ವಿನಿಮಯಗೊಂಡಿತು.ಹಿಂದಿನ ಆರು ವಹಿವಾಟು ಅವಧಿಗಳಲ್ಲಿ 110 ಪೈಸೆ ಗಳಿಕೆ ಕಂಡುಕೊಂಡಿತ್ತು.

ಬ್ರೆಂಟ್‌ ತೈಲ ದರ ಶೇ 1.67ರಷ್ಟು ಹೆಚ್ಚಾಗಿ ಒಂದು ಬ್ಯಾರೆಲ್‌ಗೆ 63.46 ಡಾಲರ್‌ಗಳಂತೆ ಮಾರಾಟವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.