ADVERTISEMENT

ಬಿಎಸ್‌ಇ 429 ಅಂಶ ಹೆಚ್ಚಳ

ಪಿಟಿಐ
Published 2 ಜುಲೈ 2020, 12:28 IST
Last Updated 2 ಜುಲೈ 2020, 12:28 IST
ಬಿಎಸ್‌ಇ
ಬಿಎಸ್‌ಇ   

ಮುಂಬೈ: ಜಾಗತಿಕ ಮಾರುಕಟ್ಟೆಗಳ ಪ್ರಭಾವಕ್ಕೆ ಒಳಗಾಗಿ ದೇಶದ ಷೇರುಪೇಟೆಗಳಲ್ಲಿ ಗುರುವಾರ ಸೂಚ್ಯಂಕಗಳು ಏರಿಕೆ ಕಂಡವು.

‘ಕೋವಿಡ್‌–19’ಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನಗಳು ನಡೆಯುತ್ತಿರುವುದು ಜಾಗತಿಕ ಷೇರುಪೇಟೆಗಳಲ್ಲಿ ಸಕಾರಾತ್ಮಕ ಚಟುವಟಿಕೆಗೆ ಕಾರಣವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ ಸತತ ಎರಡನೇ ದಿನವೂ ಏರಿಕೆ ಕಂಡಿತು. ಗುರುವಾರ 429 ಅಂಶ ಹೆಚ್ಚಾಗಿ 35,844 ಅಂಶಗಳಿಗೆ ತಲುಪಿತು.

ADVERTISEMENT

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 122 ಅಂಶ ಹೆಚ್ಚಾಗಿ 10,552 ಅಂಶಗಳಿಗೆ ಏರಿಕೆಯಾಗಿದೆ.

ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ಷೇರು ಶೇ 6ರಷ್ಟು ಗಳಿಕೆ ಕಂಡಿತು. ಟೈಟಾನ್, ಎಚ್‌ಸಿಎಲ್‌ ಟೆಕ್‌, ಟಾಟಾ ಸ್ಟೀಲ್‌, ಇನ್ಫೊಸಿಸ್‌ ಮತ್ತು ಟಿಸಿಎಸ್‌ ಷೇರುಗಳ ಬೆಲೆಯೂ ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.