ಷೇರುಪೇಟೆ
ಮುಂಬೈ: ಎಚ್‌ಡಿಎಫ್‌ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಮಹೀಂದ್ರಾ ಆ್ಯಂಡ್ ಮಹೀಂದ್ರಾದ ಷೇರುಗಳ ಖರೀದಿ ಹೆಚ್ಚಳದಿಂದ ಆರು ದಿನದ ವಹಿವಾಟಿನ ಬಳಿಕ ಷೇರು ಸೂಚ್ಯಂಕಗಳು ಮಂಗಳವಾರದ ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್ 584 ಅಂಶ ಏರಿಕೆಯಾಗಿ, 81,634ಕ್ಕೆ ಸ್ಥಿರಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 217 ಅಂಶ ಹೆಚ್ಚಳವಾಗಿ 25,013ಕ್ಕೆ ಅಂತ್ಯಗೊಂಡಿದೆ.
ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕನಾಮಿಕ್ ಜೋನ್ಸ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ರಿಲಯನ್ಸ್ ಇಂಡಸ್ಟ್ರೀಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಲಾರ್ಸೆನ್ ಆ್ಯಂಡ್ ಟೊಬ್ರೊ, ಎನ್‌ಟಿಪಿಸಿ, ಎಸ್‌ಬಿಐ, ಅಲ್ಟ್ರಾಟೆಕ್ ಸಿಮೆಂಟ್ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಟಾಟಾ ಸ್ಟೀಲ್, ಟೈಟನ್, ಬಜಾಜ್ ಫಿನ್‌ಸರ್ವ್, ಜೆಎಸ್‌ಡಬ್ಲ್ಯು ಸ್ಟೀಲ್, ಬಜಾಜ್ ಫೈನಾನ್ಸ್, ಹಿಂದುಸ್ತಾನ್ ಯೂನಿಲಿವರ್, ಐಟಿಸಿ, ಟಾಟಾ ಮೋಟರ್ಸ್ ಮತ್ತು ಟಿಸಿಎಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.
ಏಷ್ಯಾದ ಮಾರುಕಟ್ಟೆಯಲ್ಲಿ ಟೋಕಿಯೊ, ಹಾಂಗ್‌ಕಾಂಗ್ ಮತ್ತು ಸೋಲ್ ನಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿದ್ದರೆ, ಶಾಂಘೈ ಸಕಾರಾತ್ಮಕ ವಹಿವಾಟು ನಡೆಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇ 1.84ರಷ್ಟು ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 79.44 ಡಾಲರ್‌ಗೆ (₹6,670) ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.