
ಮುಂಬೈ: ಇಂಧನ, ಬ್ಯಾಂಕಿಂಗ್ ಮತ್ತು ಹಣಕಾಸು ಕಂಪನಿಗಳ ಷೇರುಗಳ ಖರೀದಿ ಹೆಚ್ಚಳದಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 650 ಅಂಶ ಹೆಚ್ಚಳವಾಗಿ, 83,277ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 211 ಅಂಶ ಏರಿಕೆಯಾಗಿ, 25,682ಕ್ಕೆ ಕೊನೆಗೊಂಡಿದೆ.
‘ಬ್ಯಾಂಕ್‌ಗಳ ಸಾಲ ನೀಡಿಕೆ ಪ್ರಮಾಣದಲ್ಲಿ ಸುಧಾರಣೆ ಆಗಿದೆ ಮತ್ತು ಬ್ಯಾಂಕ್‌ಗಳ ಆಸ್ತಿ ಗುಣಮಟ್ಟವು ಉತ್ತಮವಾಗಿದೆ. ಇದು ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ನೆರವಾದವು’ ಎಂದು ಜಿಯೋಜಿತ್ ಇನ್ವೆಸ್ಟ್‌ಮೆಂಟ್ಸ್ ಲಿಮಿಟೆಡ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.
ರೂಪಾಯಿ ಮೌಲ್ಯ ಮತ್ತು ಕಚ್ಚಾ ತೈಲದ ದರ ಸ್ಥಿರವಾಗಿರುವುದು ಸಹ ಸೂಚ್ಯಂಕಗಳ ಏರಿಕೆಗೆ ಕಾರಣವಾದವು ಎಂದು ತಿಳಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.24ರಷ್ಟು ಇಳಿಕೆ ಆಗಿದೆ. ಪ್ರತೀ ಬ್ಯಾರೆಲ್ ದರವು 67.59 ಡಾಲರ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.