ADVERTISEMENT

ಷೇರುಪೇಟೆ: 9 ದಿನದಲ್ಲಿ ₹ 5 ಲಕ್ಷ ಕೋಟಿ ನಷ್ಟ

ಪಿಟಿಐ
Published 19 ಫೆಬ್ರುವರಿ 2019, 20:00 IST
Last Updated 19 ಫೆಬ್ರುವರಿ 2019, 20:00 IST
   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ 9ನೇ ವಹಿವಾಟು ಅವಧಿಯಲ್ಲಿಯೂ ನಕಾರಾತ್ಮಕ ವಹಿವಾಟು ನಡೆಯಿತು. ಎಂಟು ವರ್ಷಗಳ ವಹಿವಾಟು ಅವಧಿಗಳಲ್ಲಿಯೇ ಅತ್ಯಂತ ದೀರ್ಘವಾದ ನಷ್ಟದ ವಹಿವಾಟು ಇದಾಗಿದೆ.

ಫೆಬ್ರುವರಿ 7 ರಿಂದ 19ರವರೆಗೆ 9 ವಹಿವಾಟು ಅವಧಿಗಳಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 5 ಲಕ್ಷ ಕೋಟಿಯಷ್ಟು ಕರಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ
₹ 141 ಲಕ್ಷ ಕೋಟಿಯಿಂದ ₹ 136 ಲಕ್ಷ ಕೋಟಿಗೆ ಇಳಿಕೆಯಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) ಮಂಗಳವಾರದ ವಹಿವಾಟಿನಲ್ಲಿ 146 ಅಂಶ ಇಳಿಕೆಯಾಗಿ, 35,352 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 36 ಅಂಶ ಇಳಿಕೆ ಕಂಡು 10,604 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಮಾಹಿತಿ ತಂತ್ರಜ್ಞಾನ (ಐ.ಟಿ) ವಲಯದ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾದವು.ಟಿಸಿಎಸ್‌ ಶೇ 3.39ರಷ್ಟು ಗರಿಷ್ಠ ನಷ್ಟ ಅನುಭವಿಸಿದೆ. ಎನ್‌ಟಿಪಿಸಿ, ಇಂಡಸ್‌ಇಂಡ್‌ ಬ್ಯಾಂಕ್‌ ಮತ್ತು ಇನ್ಫೊಸಿಸ್‌ ಷೇರುಗಳು ನಷ್ಟ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.