ADVERTISEMENT

ಷೇರುಪೇಟೆ: ರಜೆಯ ಮಂಪರು

ಪಿಟಿಐ
Published 24 ಡಿಸೆಂಬರ್ 2019, 18:45 IST
Last Updated 24 ಡಿಸೆಂಬರ್ 2019, 18:45 IST

ಮುಂಬೈ: ದೇಶದ ಷೇರುಪೇಟೆಗಳಲ್ಲಿ ವರ್ಷಾಂತ್ಯದ ರಜೆಯ ಮಂಪರು ಆವರಿಸಿದೆ. ಇದರಿಂದಾಗಿ ನಕಾರಾತ್ಮಕ ವಹಿವಾಟು ನಡೆಯುತ್ತಿದೆ.

ಮಾರಾಟದ ಒತ್ತಡದಿಂದ ವಾರದ ವಹಿವಾಟಿನ ಎರಡನೇ ದಿನವೂ ಸೂಚ್ಯಂಕಗಳು ಇಳಿಕೆ ಕಂಡಿವೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ ಷೇರುಗಳು ಅತಿ ಹೆಚ್ಚಿನ ಮಾರಾಟದ ಒತ್ತಡಕ್ಕೆ ಒಳಗಾದವು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 182 ಅಂಶ ಇಳಿಕೆ ಕಂಡು 41,461 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 48 ಅಂಶ ಇಳಿಕೆಯಾಗಿ 12,214 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಗರಿಷ್ಠ ನಷ್ಟ: ಎಚ್‌ಸಿಎಲ್‌ ಟೆಕ್‌ ಕಂಪನಿಯ ಷೇರುಗಳು ಶೇ 1.80ರಷ್ಟು ಗರಿಷ್ಠ ನಷ್ಟ ಕಂಡಿವೆ. ರಿಲಯನ್ಸ್‌ ಇಂಡಸ್ಟ್ರೀಸ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಟಿಸಿಎಸ್‌, ಟೆಕ್‌ ಮಹೀಂದ್ರಾ, ಎಲ್‌ಆ್ಯಂಡ್‌ಟಿ, ಮಾರುತಿ, ಬಜಾಜ್‌ ಫೈನಾನ್ಸ್‌ ಷೇರುಗಳೂ ಇಳಿಕೆ ಕಂಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.