ADVERTISEMENT

ಮೂರನೇ ದಿನವೂ ಸೂಚ್ಯಂಕ ಇಳಿಕೆ

ಪಿಟಿಐ
Published 18 ಫೆಬ್ರುವರಿ 2021, 14:46 IST
Last Updated 18 ಫೆಬ್ರುವರಿ 2021, 14:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ದಿನವೂ ನಕಾರಾತ್ಮಕ ವಹಿವಾಟು ನಡೆಯಿತು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 379 ಅಂಶ ಇಳಿಕೆ ಕಂಡು 51,325 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು.

ಎನ್‌ಎಸ್‌ಇ ನಿಫ್ಟಿ 90 ಅಂಶ ಇಳಿಕೆಯಾಗಿ 15,119 ಅಂಶಗಳಿಗೆ ತಲುಪಿತು. ಕಚ್ಚಾ ತೈಲ ದರ ಏರಿಕೆ ಹಾಗೂ ಹಣದುಬ್ಬರ ಹೆಚ್ಚಳ ಆಗುವ ಆತಂಕವು ವಹಿವಾಟಿನ ಮೇಲೆ ಪರಿಣಾಮ ಉಂಟುಮಾಡಿತು ಎಂದು ತಜ್ಞರು ಹೇಳಿದ್ದಾರೆ.

ದಿನದ ವಹಿವಾಟಿನಲ್ಲಿ ಬಜಾಜ್‌ ಫೈನಾನ್ಸ್‌ ಷೇರು ಶೇ 2.43ರಷ್ಟು ಗರಿಷ್ಠ ನಷ್ಟ ಕಂಡಿತು. ವಾಹನ, ಬ್ಯಾಂಕಿಂಗ್‌, ಹಣಕಾಸು, ಆರೋಗ್ಯಸೇವೆ ಮತ್ತು ದೂರಸಂಪರ್ಕ ವಲಯದ ಸೂಚ್ಯಂಕಗಳು ಶೇ 1.35ರವರೆಗೂ ಇಳಿಕೆ ಕಂಡವು.

ADVERTISEMENT

ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಸೂಚ್ಯಂಕಗಳು ಶೇ 0.69ರಷ್ಟು ಏರಿಕೆ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.