ADVERTISEMENT

ನಾಲ್ಕನೆಯ ದಿನವೂ ಸೆನ್ಸೆಕ್ಸ್ ಇಳಿಕೆ

ಪಿಟಿಐ
Published 15 ಜೂನ್ 2022, 14:35 IST
Last Updated 15 ಜೂನ್ 2022, 14:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಸತತ ನಾಲ್ಕನೆಯ ದಿನವೂ ಇಳಿಕೆಯ ಹಾದಿಯಲ್ಲಿ ಸಾಗಿದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್, ಬುಧವಾರ 152 ಅಂಶ ಇಳಿಯಿತು. ಮಾರುಕಟ್ಟೆಯ ಗಮನವು ಬಡ್ಡಿ ದರದ ವಿಚಾರವಾಗಿ ಅಮೆರಿಕದ ಫೆಡರಲ್ ರಿಸರ್ವ್‌ ಕೈಗೊಳ್ಳುವ ತೀರ್ಮಾನದ ಮೇಲೆ ನೆಟ್ಟಿದೆ.

ರೂಪಾಯಿ ಮೌಲ್ಯ ಕುಸಿತ, ವಿದೇಶಿ ಬಂಡವಾಳ ಹೊರಹರಿವು ಕೂಡ ಮಾರುಕಟ್ಟೆ ಕುಸಿತಕ್ಕೆ ಕಾರಣವಾದವು ಎಂದು ವರ್ತಕರು ತಿಳಿಸಿದ್ದಾರೆ. ಬಿಎಸ್‌ಇ ಸೆನ್ಸೆಕ್ಸ್ 52,541 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿದ್ದು ಇದು 10 ತಿಂಗಳ ಕನಿಷ್ಠ ಮಟ್ಟ.

ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 39 ಅಂಶ ಕುಸಿದಿದೆ. ‘ಅಮೆರಿಕದ ಫೆಡರಲ್‌ ರಿಸರ್ವ್‌ ತೀರ್ಮಾನ ಏನಿರಬಹುದು ಎಂಬ ನಿರೀಕ್ಷೆಯಲ್ಲಿ ಮಾರುಕಟ್ಟೆಯಲ್ಲಿ ಭೀತಿ ಮನೆ ಮಾಡಿದೆ’ ಎಂದು ರೆಲಿಗೇರ್ ಬ್ರೋಕಿಂಗ್ ಸಂಸ್ಥೆಯ ಸಂಶೋಧನಾ ಉಪಾಧ್ಯಕ್ಷ ಅಜಿತ್ ಮಿಶ್ರಾ ಹೇಳಿದ್ದಾರೆ.

ADVERTISEMENT

ಜಾಗತಿಕ ಮಾರುಕಟ್ಟೆಗಳಲ್ಲಿಯೂ ಹೂಡಿಕೆದಾರರು ಫೆಡರಲ್ ರಿಸರ್ವ್ ತೀರ್ಮಾನದ ಮೇಲೆ ಕಣ್ಣಿಟ್ಟಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 1ರಷ್ಟು ಕಡಿಮೆ ಆಗಿ ಪ್ರತಿ ಬ್ಯಾರೆಲ್‌ಗೆ 120 ಡಾಲರ್‌ಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.