ADVERTISEMENT

ಪೇಟೆಯಲ್ಲಿ ಮಾರಾಟದ ಒತ್ತಡ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2019, 20:30 IST
Last Updated 25 ಏಪ್ರಿಲ್ 2019, 20:30 IST
   

ಮುಂಬೈ (ಪಿಟಿಐ): ದೇಶದ ಷೇರುಪೇಟೆಗಳಲ್ಲಿ ಗುರುವಾರ ಮಾರಾಟದ ಒತ್ತಡ ಕಂಡುಬಂದು ಸೂಚ್ಯಂಕಗಳು ಇಳಿಕೆ ಕಾಣುವಂತಾಯಿತು.

ಬುಧವಾರದ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದ ವಹಿವಾಟು ಗುರುವಾರ ಮತ್ತೆ ನಕಾರಾತ್ಮಕ ಹಾದಿ ಹಿಡಿಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ಸಕಾರಾತ್ಮಕವಾಗಿ ವಹಿವಾಟು ಆರಂಭಿಸಿತ್ತು. ಆದರೆ ಕಡೆಯ ಒಂದು ಗಂಟೆಯಲ್ಲಿ ನಡೆದ ಮಾರಾಟದ ಒತ್ತಡದಿಂದ324 ಅಂಶ ಇಳಿಕೆಯಾಗಿ 38,730 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ADVERTISEMENT

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 85 ಅಂಶ ಇಳಿಕೆಯಾಗಿ 11,641 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ ಇಳಿಕೆಯಿಂದಾಗಿವಾಹನ, ಲೋಹ, ಇಂಧನ ಮತ್ತು ಹಣಕಾಸು ವಲಯದ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾದವು. ಇದು ಪರಿಣಾಮ ವಹಿವಾಟಿನ ಮೇಲೆ ಪ್ರತಿಫಲಿಸಿತು.

ಮಾರ್ಚ್‌ ತಿಂಗಳ ವಾಯಿದಾ ವಹಿವಾಟು ಗುರುವಾರ ಮುಕ್ತಾಯವಾಗಲಿರುವುದು ಸಹ ಸೂಚ್ಯಂಕದ ಇಳಿಕೆಗೆ ಕಾರಣವಾಯಿತು ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.