ADVERTISEMENT

ಮಾರಾಟದ ಒತ್ತಡ

​ಪ್ರಜಾವಾಣಿ ವಾರ್ತೆ
Published 23 ಜನವರಿ 2019, 20:00 IST
Last Updated 23 ಜನವರಿ 2019, 20:00 IST

ಮುಂಬೈ (ಪಿಟಿಐ): ಎಫ್‌ಎಂಸಿಜಿ, ಹಣಕಾಸು, ಐಟಿ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ಬುಧವಾರ ಷೇರುಪೇಟೆಗಳಲ್ಲಿ ವಹಿವಾಟು ಇಳಿಕೆ ಕಂಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 336 ಅಂಶ ಇಳಿಕೆಯಾಗಿ 36,108 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 91 ಅಂಶ ಇಳಿಕೆಯಾಗಿ 10,831 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 11 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ
₹ 71.33 ರಂತೆ ವಿನಿಮಯಗೊಂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.