ADVERTISEMENT

ಸೆನ್ಸೆಕ್ಸ್‌ 222 ಅಂಶ ಏರಿಕೆ

ಪಿಟಿಐ
Published 11 ಫೆಬ್ರುವರಿ 2021, 16:04 IST
Last Updated 11 ಫೆಬ್ರುವರಿ 2021, 16:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಎರಡು ದಿನಗಳಿಂದ ಇಳಿಮುಖವಾಗಿದ್ದ ದೇಶದ ಷೇರುಪೇಟೆಗಳು ಗುರುವಾರ ಚೇತರಿಕೆ ಕಂಡು ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿದವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 222 ಅಂಶ ಏರಿಕೆ ಕಂಡು 51,531 ಅಂಶಗಳಲ್ಲಿ ದಿನದ ವಹಿವಾಟು ಅಂತ್ಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 67 ಅಂಶ ಹೆಚ್ಚಾಗಿ 15,173 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ದಿನದ ವಹಿವಾಟಿನಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರು ಶೇ 4.07ರಷ್ಟು ಗರಿಷ್ಠ ಏರಿಕೆ ಕಂಡಿತು.

ADVERTISEMENT

ಆರ್ಥಿಕ ಚೇತರಿಕೆಗೆ ಅನುಕೂಲ ಆಗುವಂತೆ ಬಡ್ಡಿದರ ಸದ್ಯದ ಮಟ್ಟಿಗೆ ಕಡಿಮೆ ಮಟ್ಟದಲ್ಲಿಯೇ ಇರಲಿವೆ ಎಂದು ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್ ಹೇಳಿದೆ. ಇದು ಜಾಗತಿಕ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟಿಗೆ ಕಾರಣವಾಗಿ ದೇಶದಲ್ಲಿಯೂ ಅದರ ಪ್ರಭಾವ ಉಂಟಾಯಿತು ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.