ADVERTISEMENT

ಸಂಪತ್ತು ₹ 12.38 ಲಕ್ಷ ಕೋಟಿ ವೃದ್ಧಿ

ಷೇರುಪೇಟೆ ವಾರದ ವಹಿವಾಟು ಸಕಾರಾತ್ಮಕ ಅಂತ್ಯ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 17:39 IST
Last Updated 11 ಏಪ್ರಿಲ್ 2020, 17:39 IST
bull
bull   

ಮುಂಬೈ: ಕೊರೊನಾ ನಿಯಂತ್ರಣಕ್ಕೆ ಕೇಂದ್ರದಿಂದ ಆರ್ಥಿಕ ಉತ್ತೇಜನ ಕೊಡುಗೆ ಪ್ರಕಟವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಹೀಗಾಗಿ ಷೇರುಪೇಟೆಗಳಲ್ಲಿ ವಾರದ ವಹಿವಾಟು ಸಕಾರಾತ್ಮಕವಾಗಿ ಅಂತ್ಯಕಂಡಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 3,569 ಅಂಶ ಜಿಗಿತ ಕಂಡು 31,159 ಅಂಶಗಳಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ವಾರದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 12.38 ಲಕ್ಷ ಕೋಟಿ ಹೆಚ್ಚಾಗಿದೆ. ಇದರಿಂದ ಮುಂಬೈ ಷೇರುಪೇಟೆಯ ಬಂಡವಾಳ ಮೌಲ್ಯ ₹108.43 ಲಕ್ಷ ಕೋಟಿಗಳಿಂದ ₹ 120.81 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 1,028 ಅಂಶ ಹೆಚ್ಚಾಗಿ 9,112 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಸಣ್ಣ ಷೇರುಗಳಿಗೆ ಹೆಚ್ಚಿನ ಹಾನಿ

ಬಿಎಸ್‌ಇನಲ್ಲಿ ಸಣ್ಣ ಮತ್ತು ಮಧ್ಯಮ ಶ್ರೇಣಿ ಸೂಚ್ಯಂಕಗಳು ಮಾರ್ಚ್‌ನಲ್ಲಿ ಶೇ 30ರಷ್ಟು ಕುಸಿತ ಕಂಡಿವೆ.

ಕೋವಿಡ್‌–19ಯಿಂದಾಗಿ ಷೇರುಪೇಟೆಗಳಲ್ಲಿ ಮಾರಾಟದ ಒತ್ತಡ ಸೃಷ್ಟಿಯಾಗಿ ಈ ಸೂಚ್ಯಂಕದಲ್ಲಿರುವ ಸಣ್ಣ ಕಂಪನಿಗಳ ಷೇರುಗಳಿಗೆ ಹೆಚ್ಚಿನ ಹಾನಿಯಾಗಿದೆ.

ಮಾರ್ಚ್‌ನಲ್ಲಿ ಷೇರುಪೇಟೆಯಲ್ಲಿ ಭಾರಿ ಪ್ರಮಾಣದ ಮಾರಾಟದ ಒತ್ತಡ ಸೃಷ್ಟಿಯಾಗಿತ್ತು. ಮಾರ್ಚ್‌ 24ರಂದು ಒಂದು ವರ್ಷಗಳ ಕನಿಷ್ಠ ಮಟ್ಟವಾದ 25,638 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು. ಜನವರಿ 20ರಂದು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 42,274 ಅಂಶಗಳಿಗೆ ತಲುಪಿತ್ತು.

ಸದ್ಯದ ಮಟ್ಟಿಗೆ ಜಾಗತಿಕವಾಗಿ ತಲೆದೂರಿರುವ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಸಣ್ಣ ಮತ್ತು ಮಧ್ಯಮ ಶ್ರೇಣಿಯ ಸೂಚ್ಯಂಕಗಳ ಮಾರಾಟದ ಒತ್ತಡ ಮುಂದುವರಿಯಲಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.