ಮುಂಬೈ: ದೇಶದ ಷೇರು ಸೂಚ್ಯಂಕಗಳು ಸೋಮವಾರ ನಡೆದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.
ಕೆನಡಾ, ಮೆಕ್ಸಿಕೊ ಮತ್ತು ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಅಮೆರಿಕ ಸುಂಕ ಹೆಚ್ಚಳ ಮಾಡಿದೆ. ಇದು ದೇಶದ ಷೇರುಪೇಟೆಯ ಮೇಲೆ ಪರಿಣಾಮ ಬೀರಿದ್ದರಿಂದ ಸೂಚ್ಯಂಕಗಳು ಇಳಿದಿವೆ. ವಿದೇಶಿ ಬಂಡವಾಳದ ಹೊರಹರಿವು ಸಹ ಇಳಿಕೆಗೆ ಕಾರಣವಾಯಿತು.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 319 ಅಂಶ ಇಳಿಕೆಯಾಗಿ, 77,186ಕ್ಕೆ ವಹಿವಾಟು ಕೊನೆಗೊಂಡಿತು. ವಹಿವಾಟಿನ ವೇಳೆ 749 ಅಂಶ ಕುಸಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 121 ಅಂಶ ಕಡಿಮೆಯಾಗಿ 23,361ಕ್ಕೆ ಅಂತ್ಯಗೊಂಡಿತು.
ಲಾರ್ಸೆನ್ ಆ್ಯಂಡ್ ಟೊಬ್ರೊ, ಟಾಟಾ ಮೋಟರ್ಸ್, ಹಿಂದುಸ್ತಾನ್ ಯೂನಿಲಿವರ್, ಏಷ್ಯನ್ ಪೇಂಟ್ಸ್, ಐಟಿಸಿ, ಪವರ್ ಗ್ರಿಡ್, ಎನ್‌ಟಿಪಿಸಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರಿನ ಮೌಲ್ಯದಲ್ಲಿ ಇಳಿಕೆ ಆಗಿದೆ.
ಬಜಾಜ್ ಫೈನಾನ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಬಜಾಜ್ ಫಿನ್‌ಸರ್ವ್, ಭಾರ್ತಿ ಏರ್‌ಟೆಲ್ ಮತ್ತು ಮಾರುತಿ ಸುಜುಕಿ ಷೇರಿನ ಮೌಲ್ಯದಲ್ಲಿ ಹೆಚ್ಚಳವಾಗಿದೆ.
ಏಷ್ಯನ್ ಮಾರುಕಟ್ಟೆಯಲ್ಲಿ ಸೋಲ್, ಟೋಕಿಯೊ ಮತ್ತು ಹಾಂಗ್‌ಕಾಂಗ್ ನಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿವೆ.
ಜಾಗತಿಕ ಬ್ರೆಂಟ್ ಕಚ್ಚಾತೈಲ ದರವು ಪ್ರತಿ ಬ್ಯಾರೆಲ್‌ಗೆ ಶೇ 1.15ರಷ್ಟು ಹೆಚ್ಚಳವಾಗಿದೆ. 76.50 ಡಾಲರ್ (₹6,662) ಆಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಶನಿವಾರದ ವಹಿವಾಟಿನಲ್ಲಿ ₹1,327 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.