ADVERTISEMENT

‘ಚೇತರಿಕೆಯ ವಿಶ್ವಾಸ ಮೂಡಿಸುವ ಬೆಳವಣಿಗೆ’

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 3:40 IST
Last Updated 4 ಅಕ್ಟೋಬರ್ 2020, 3:40 IST

ನವದೆಹಲಿ (ಪಿಟಿಐ): ಆರ್ಥಿಕ ಬೆಳವಣಿಗೆಯು ಸಹಜ ಸ್ಥಿತಿಗೆ ಮರಳುತ್ತಿದೆ ಎನ್ನುವ ವಿಶ್ವಾಸ ಮೂಡಿಸುವುದಕ್ಕೆ ಸೆಪ್ಟೆಂಬರ್‌ ತಿಂಗಳ ಅಂಕಿ–ಅಂಶಗಳು ಪೂರಕವಾಗಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ಹೇಳಿದೆ.

ಕೋವಿಡ್‌–19 ಬಿಕ್ಕಟ್ಟಿನ ಸಂದರ್ಭ ದಲ್ಲಿ ಸರ್ಕಾರ ತೆಗೆದುಕೊಂಡಿದ್ದ ಕ್ರಮ ಗಳು ಇದೀಗ ಫಲ ನೀಡಲಾರಂಭಿಸಿವೆ. ಸೆಪ್ಟೆಂಬರ್‌ನಲ್ಲಿ ₹ 95,480 ಕೋಟಿ ಜಿಎಸ್‌ಟಿ ಸಂಗ್ರಹವಾಗಿರುವುದೇ ಇದಕ್ಕೆ ಸಾಕ್ಷಿ. ಹಾಗೆಯೇ ತಯಾರಿಕಾ ವಲಯದ ಚಟುವಟಿಕೆಗಳೂ ಸೆಪ್ಟೆಂಬರ್‌ನಲ್ಲಿ ಉತ್ತಮ ಚೇತರಿಕೆ ಕಂಡಿವೆ ಎಂದು ವಿವರಿಸಿದೆ.

ಜನರ ಸಂಕಷ್ಟಗಳನ್ನು ನಿವಾರಿಸಲು ಅಗತ್ಯವಾದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದೂ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.