ಬೆಂಗಳೂರು: ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಬಳಕೆ ಉತ್ಪನ್ನಗಳನ್ನು (ಎಫ್‌ಎಂಸಿಜಿ) ಸಗಟು ವ್ಯಾಪಾರಿಗಳಿಂದ ಸಣ್ಣ ವ್ಯಾಪಾರಿಗಳಿಗೆ ತಲುಪಿಸುವ ‘ಅಪ್ನಾಕ್ಲಬ್’ ವೇದಿಕೆಯು ಸಿಕೋಯಾ ಕ್ಯಾಪಿಟಲ್ ಇಂಡಿಯಾಸ್ ಸರ್ಜ್ ನಿಧಿಯಿಂದ ₹ 37 ಕೋಟಿ ಹೂಡಿಕೆ ಪಡೆದುಕೊಂಡಿರುವುದಾಗಿ ತಿಳಿಸಿದೆ.
‘ಈ ಹೂಡಿಕೆಯಿಂದಾಗಿ ನಮಗೆ ಗ್ರಾಮೀಣ ಪ್ರದೇಶಗಳಲ್ಲಿ ನಮ್ಮ ಚಟುವಟಿಕೆಯನ್ನು ಇನ್ನಷ್ಟು ವಿಸ್ತರಿಸಲು ಸಾಧ್ಯವಾಗುತ್ತದೆ’ ಎಂದು ಅಪ್ನಾಕ್ಲಬ್ ಕಂಪನಿಯ ಸಿಒಒ ಮನೀಶ್ ಕುಮಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.