ADVERTISEMENT

ಆಫ್ರಿಕಾದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾದ ಸೀರಂ ಇನ್‌ಸ್ಟಿಟ್ಯೂಟ್

ರಾಯಿಟರ್ಸ್
Published 24 ಮೇ 2022, 1:43 IST
Last Updated 24 ಮೇ 2022, 1:43 IST
ಆದಾರ್ ಪೂನಾವಾಲ
ಆದಾರ್ ಪೂನಾವಾಲ    

ಕೋವಿಡ್ ಲಸಿಕೆ ತಯಾರಿಕಾ ಕಂಪನಿ ಸೀರಂ ಇನ್‌ಸ್ಟಿಟ್ಯೂಟ್, ದಕ್ಷಿಣ ಆಫ್ರಿಕಾದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ.

ಈ ಮೂಲಕ, ಜಾಗತಿಕವಾಗಿ ಉದ್ಯಮ ವಿಸ್ತರಣೆಗೆ ಸಂಸ್ಥೆ ಮುಂದಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆದಾರ್ ಪೂನಾವಾಲ ಸೋಮವಾರ ತಿಳಿಸಿದ್ದಾರೆ.

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪೂನಾವಾಲ ಅವರು ಆಫ್ರಿಕಾ ಮೂಲದ ಹೂಡಿಕೆದಾರರನ್ನು ಭೇಟಿಯಾಗಿ, ಉತ್ಪಾದನಾ ಘಟಕ ಸ್ಥಾಪಿಸುವ ಕುರಿತು ಚರ್ಚಿಸಿದ್ದಾರೆ.

ADVERTISEMENT

ಆಫ್ರಿಕಾ ಖಂಡದಲ್ಲಿ ಕೋವಿಡ್ ಲಸಿಕೆ ಉತ್ಪಾದಿಸುವ ಯಾವುದೇ ಘಟಕವಿಲ್ಲ. ಹೀಗಾಗಿ ಅಲ್ಲಿ ಕೋವಿಡ್ ಪರಿಸ್ಥಿತಿ ಎದುರಿಸಲು ಸಮಸ್ಯೆಯಾಗಿತ್ತು. ಆ ಸಂದರ್ಭದಲ್ಲಿ ಸೀರಂ ಇನ್‌ಸ್ಟಿಟ್ಯೂಟ್ ಸಹಿತ ಹಲವು ಸಂಸ್ಥೆಗಳು ಕೋವಿಡ್ ಲಸಿಕೆ ಪೂರೈಸಿದ್ದವು.

ಹೀಗಾಗಿ, ದಕ್ಷಿಣ ಆಫ್ರಿಕಾ ಇಲ್ಲವೇ ರುವಾಂಡದಲ್ಲಿ ಲಸಿಕೆ ಉತ್ಪಾದನಾ ಘಟಕ ಸ್ಥಾಪಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸಂಸ್ಥೆ ಗುರುತಿಸಿಕೊಳ್ಳುವಂತೆ ಮಾಡುವ ಗುರಿ ಹೊಂದಿದ್ದೇವೆ ಎಂದು ಪೂನಾವಾಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.