ADVERTISEMENT

ರಾಷ್ಟ್ರೀಕೃತ ಬ್ಯಾಂಕ್‌ ಷೇರುಗಳ ಬೆಲೆಯಲ್ಲಿ ಏರಿಕೆ

ಆರ್‌‌ಬಿಐ ₹ 1.76 ಲಕ್ಷ ಕೋಟಿ ಬಿಡುಗಡೆ ಪರಿಣಾಮ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2019, 10:40 IST
Last Updated 27 ಆಗಸ್ಟ್ 2019, 10:40 IST
   

ಮುಂಬೈ:ಕೇಂದ್ರ ಸರ್ಕಾರಕ್ಕೆ ಉತ್ತೇಜನ ರೂಪದಲ್ಲಿ ಬೃಹತ್ ಗಾತ್ರದಲ್ಲಿ ಹಣಬಿಡುಗಡೆ ಮಾಡಲು ಒಪ್ಪಿಗೆ ಕೊಟ್ಟ ಕೂಡಲೆ ಇತ್ತ ಮುಂಬೈ ಷೇರು ಮಾರುಕಟ್ಟೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಷೇರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.

ಮುಂಬೈ ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಸಂಜೆ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ರಾಷ್ಟ್ರೀಕೃತ ಬ್ಯಾಂಕುಗಳ ಷೇರುಗಳ ಬೆಲೆಯಲ್ಲಿ ಏರಿಕೆ ಕಂಡಿದೆ. ಕಳೆದ ಒಂದು ವಾರದಿಂದ ಷೇರು ಮಾರುಕಟ್ಟೆಯಲ್ಲಿ ಈ ಬೆಳವಣಿಗೆ ಕಂಡು ಬಂದಿದ್ದು ಈ ಬ್ಯಾಂಕುಗಳ ಷೇರುಗಳ ವಿವರಗಳಿಗಾಗಿ ಜನರು ಹುಡುಕಾಡುತ್ತಿದ್ದಾರೆ.

ಮುಂಬೈ ಷೇರು ಮಾರುಕಟ್ಟೆಯಲ್ಲಿಸೋಮವಾರ ಬ್ಯಾಂಕ್ ಆಫ್ ಇಂಡಿಯಾದ ಷೇರು ಬೆಲೆ ಷೇರುಗಳ ಬೆಲೆ 62.04ರಷ್ಟಿತ್ತು.ಆದರೆ ಮಂಗಳವಾರ ಸಂಜೆವೇಳೆಗೆ 69.40ಕ್ಕೆ ತಲುಪಿದೆ.

ADVERTISEMENT

ರಾಷ್ಟ್ರೀಕೃತ ಬ್ಯಾಂಕುಗಳಾದ ಅಲಹಾಬಾದ್ ಬ್ಯಾಂಕ್, ಆಂಧ್ರ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಕಾರ್ಪೊರೇಷನ್ ಬ್ಯಾಂಕ್ ಗಳ ಷೇರುಗಳ ಬೆಲೆಗಳಲ್ಲಿ ಏರಿಕೆ ಕಾಣುವ ನಿರೀಕ್ಷೆ ಇದೆ.

ಆರ್‌ಬಿಐನ ಮಾಜಿ ಗವರ್ನರ್‌ ಬಿಮಲ್‌ ಜಲನ್‌ ನೇತೃತ್ವದಲ್ಲಿನ ಉನ್ನತ ಮಟ್ಟದ ಸಮಿತಿಯು ಮಾಡಿದ್ದ ಶಿಫಾರಸುಗಳನ್ನು ಕೇಂದ್ರೀಯ ಬ್ಯಾಂಕ್‌ನ ನಿರ್ದೇಶಕ ಮಂಡಳಿಯು ಒಪ್ಪಿಕೊಂಡಿದೆ. ಪರಿಣಾಮವಾಗಿಸೋಮವಾರ ನಡೆದ ಸಭೆಯಲ್ಲಿ ₹ 1.76 ಲಕ್ಷ ಕೋಟಿ ಹಣವನ್ನು ಬಿಡುಗಡೆ ಮಾಡಲು ನಿರ್ಧಾರ ಕೈಗೊಂಡ ನಂತರ ಈ ಬೆಳವಣಿಗೆ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.