ADVERTISEMENT

ಎಚ್‌ಸಿಎಲ್ ಟೆಕ್ನಾಲಜೀಸ್ ಅಧ್ಯಕ್ಷ ಸ್ಥಾನ ತ್ಯಜಿಸಿದ ಶಿವ ನಾಡಾರ್

ಏಜೆನ್ಸೀಸ್
Published 17 ಜುಲೈ 2020, 6:51 IST
Last Updated 17 ಜುಲೈ 2020, 6:51 IST
ಶಿವ ನಡಾರ್‌
ಶಿವ ನಡಾರ್‌   

ನವದೆಹಲಿ: ಎಚ್‌ಸಿಎಲ್ ಟೆಕ್ನಾಲಜೀಸ್ ನಿರ್ದೇಶಕರ ಮಂಡಳಿಯ ಅಧ್ಯಕ್ಷ ಶಿವ ನಡಾರ್‌ ಅವರು ಹುದ್ದೆ ತ್ಯಜಿಸಿದ್ದಾರೆ. ಅವರ ಮಗಳು ರೋಶನಿ ನಡಾರ್ ಅವರು ಹುದ್ದೆಯನ್ನು ಅಲಂಕರಿಸಿದ್ದಾರೆ.

‘ಶಿವ ನಡಾರ್‌ ಅವರು ಹುದ್ದೆ ತ್ಯಜಿಸುವ ಇಚ್ಚೆ ವ್ಯಕ್ತಪಡಿಸಿದ್ದರಿಂದ ನಿರ್ದೇಶಕರ ಮಂಡಳಿಯು ರೋಶನಿ ನಡಾರ್ ಮಲ್ಹೊತ್ರಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಜುಲೈ 17ರಿಂದಲೇ ಇದು ಜಾರಿಗೆ ಬರಲಿದೆ’ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

‘ಶಿವ ನಡಾರ್ ಅವರು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಮುಂದುವರಿಯಲಿದ್ದು, ಮುಖ್ಯ ಕಾರ್ಯತಂತ್ರ ಅಧಿಕಾರಿಯಾಗಿರಲಿದ್ದಾರೆ’ ಎಂದೂ ಪ್ರಕಟಣೆ ತಿಳಿಸಿದೆ.

ADVERTISEMENT

ಜೂನ್‌ನಲ್ಲಿ ಕೊನೆಗೊಂಡ ತ್ರೈಮಾಸಿಕದಲ್ಲಿ ಎಚ್‌ಸಿಎಲ್ ಟೆಕ್ನಾಲಜೀಸ್ ನಿವ್ವಳ ಲಾಭದಲ್ಲಿ ಶೇ 7.3ರಷ್ಟು ಕುಸಿತ ದಾಖಲಾಗಿತ್ತು. ಈ ತ್ರೈಮಾಸಿಕ ಅವಧಿಯಲ್ಲಿ ಕಂಪನಿಯ ನಿವ್ವಳ ಲಾಭ ₹2,925 ಕೋಟಿ ಆಗಿದ್ದರೆ, ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ಕಂಪನಿಯ ನಿವ್ವಳ ಲಾಭ ₹3,154 ಕೋಟಿ ಆಗಿತ್ತು.

ಆದಾಯವೂ ಶೇ 4ರಷ್ಟು ಕುಸಿತವಾಗಿತ್ತು. ಹಿಂದಿನ ತ್ರೈಮಾಸಿಕದಲ್ಲಿ ₹18,590 ಕೋಟಿ ನಿವ್ವಳ ಆದಾಯ ಇದ್ದರೆ ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹17,841 ಕೋಟಿ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.