
ಪಿಟಿಐ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರದ ವಹಿವಾಟಿನಲ್ಲಿ ಬೆಳ್ಳಿ ಧಾರಣೆ ಏರಿಕೆ ಕಂಡಿದ್ದರೆ, ಚಿನ್ನದ ದರ ಇಳಿಕೆಯಾಗಿದೆ.
ಕೆ.ಜಿ ಬೆಳ್ಳಿ ದರ ₹3,650 ಹೆಚ್ಚಳವಾಗಿ, ₹2.40 ಲಕ್ಷದಂತೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹500 ಇಳಿಕೆಯಾಗಿ, ₹1,41,800 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ವ್ಯಾಪಾರಿಗಳಿಂದ ನಿರಂತರ ಖರೀದಿಯು ಬೆಳ್ಳಿ ಬೆಲೆ ಹೆಚ್ಚಳಕ್ಕೆ ಕಾರಣ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯಾಗಿದ್ದರಿಂದ ಲಾಭದ ಗಳಿಕೆಗಾಗಿ ಹೂಡಿಕೆದಾರರು ಚಿನ್ನದ ಮಾರಾಟಕ್ಕೆ ಮುಂದಾದರು. ಇದು ಹಳದಿ ಲೋಹದ ದರ ಇಳಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.