
ಪಿಟಿಐ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಕಂಡಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹8,100 ಹೆಚ್ಚಳವಾಗಿ (ಶೇ 4.92), ₹1,72,800ರಂತೆ ಮಾರಾಟವಾಗಿದೆ. ಬೆಳ್ಳಿ ದರವು ಕೆ.ಜಿಗೆ ₹32 ಸಾವಿರ (ಶೇ 11.94) ಏರಿಕೆಯಾಗಿ, ₹3 ಲಕ್ಷಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನ ಮತ್ತು ಬೆಳ್ಳಿ ಖರೀದಿಗೆ ಮುಂದಾಗಿದ್ದಾರೆ. ಇದರಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಈ ಲೋಹಗಳ ಬೆಲೆಯು ಏರಿಕೆಯಾಗಿದ್ದು, ಬೆಲೆ ಹೆಚ್ಚಳದ ಪರಿಣಾಮ ದೇಶದ ಮಾರುಕಟ್ಟೆಯ ಮೇಲೆಯೂ ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.