
ಪಿಟಿಐ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರವು ಶೇ 3ರಷ್ಟು ಮತ್ತು ಬೆಳ್ಳಿ ಬೆಲೆಯು ಶೇ 10.16ರಷ್ಟು ಕುಸಿದಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹4,500 ಇಳಿಕೆಯಾಗಿ ₹1,60,600ರಂತೆ ಮಾರಾಟವಾಗಿದೆ. ಬೆಳ್ಳಿ ದರವು ಕೆ.ಜಿಗೆ ₹30,300ರಷ್ಟು ಕಡಿಮೆಯಾಗಿ, ₹2.68 ಲಕ್ಷಕ್ಕೆ ಇಳಿದಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಚಿನ್ನ ಮತ್ತು ಬೆಳ್ಳಿಯ ಮಾರಾಟಕ್ಕೆ ಮುಂದಾಗಿದ್ದಾರೆ. ಇದು ಅಮೂಲ್ಯ ಲೋಹಗಳ ಬೆಲೆ ಇಳಿಕೆಗೆ ಕಾರಣ ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.