
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.
ಬೆಳ್ಳಿ ದರವು ಕೆ.ಜಿಗೆ ₹15 ಸಾವಿರ ಹೆಚ್ಚಳವಾಗಿ, ₹2.86 ಲಕ್ಷದಂತೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1,500 ಏರಿಕೆಯಾಗಿ, ₹1,46,500ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಕಳೆದ ನಾಲ್ಕು ದಿನದ ವಹಿವಾಟಿನಲ್ಲಿ ಬೆಳ್ಳಿ ದರದಲ್ಲಿ ₹42,500 (ಶೇ 17.45ರಷ್ಟು) ಹೆಚ್ಚಳವಾಗಿದೆ.
ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಕಡಿಮೆ ಆಗದಿರುವುದು, ಡಾಲರ್ ಮೌಲ್ಯ ಇಳಿಕೆ ಮತ್ತು ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿಮೆ ಮಾಡುವ ನಿರೀಕ್ಷೆ ಹೆಚ್ಚಳದಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಮುಖ ಮಾಡಿದ್ದಾರೆ. ಇದು ಚಿನ್ನ ಮತ್ತು ಬೆಳ್ಳಿ ದರ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.