
ಪಿಟಿಐ
ಬೆಂಗಳೂರು: ಬೆಂಗಳೂರಿನ ರಿಟೇಲ್ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಏರಿಕೆ ಆಗಿದೆ.
24 ಕ್ಯಾರಟ್ ಪರಿಶುದ್ಧ ಚಿನ್ನದ ಬೆಲೆ 10 ಗ್ರಾಂಗೆ ₹1,67,590 ಆಗಿದೆ. ಬೆಳ್ಳಿ ದರವು ಕೆ.ಜಿಗೆ ₹3,64,105ಕ್ಕೆ ತಲುಪಿದೆ. ಶನಿವಾರದ ವಹಿವಾಟಿಗೆ ಹೋಲಿಸಿದರೆ ಚಿನ್ನದ ದರದಲ್ಲಿ ₹2,590 ಮತ್ತು ಬೆಳ್ಳಿ ದರದಲ್ಲಿ ₹9,805 ಏರಿಕೆಯಾಗಿದೆ.
ಶನಿವಾರದ ವಹಿವಾಟಿನಲ್ಲಿ ಚಿನ್ನ, ಬೆಳ್ಳಿ ದರವು ಕ್ರಮವಾಗಿ ₹1.65 ಲಕ್ಷ ಮತ್ತು ₹3,54,300 ಇತ್ತು.
ಲಂಡನ್ ಮಾರುಕಟ್ಟೆಯಲ್ಲಿ ಸೋಮವಾರದ ವಹಿವಾಟಿನಲ್ಲಿ ಚಿನ್ನದ ದರವು ಒಂದು ಔನ್ಸ್‌ಗೆ (28.34 ಗ್ರಾಂ) 5,111 ಡಾಲರ್‌ಗೆ ಏರಿಕೆಯಾಗಿದೆ. ಬೆಳ್ಳಿ ದರವು ಒಂದು ಔನ್ಸ್‌ಗೆ 110 ಡಾಲರ್ ಆಗಿದೆ. ಇದು ಸಾರ್ವಕಾಲಿಕ ಗರಿಷ್ಠ ಮಟ್ಟವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.