ADVERTISEMENT

ನವದೆಹಲಿ: ಬೆಳ್ಳಿ ದರ ಕೆ.ಜಿಗೆ ₹3 ಸಾವಿರ ಜಿಗಿತ

ಪಿಟಿಐ
Published 26 ಆಗಸ್ಟ್ 2025, 13:54 IST
Last Updated 26 ಆಗಸ್ಟ್ 2025, 13:54 IST
   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆಯಾಗಿದೆ. 

ಬೆಳ್ಳಿ ಧಾರಣೆ ಕೆ.ಜಿಗೆ ₹3 ಸಾವಿರ ಹೆಚ್ಚಳವಾಗಿ, ₹1.18 ಲಕ್ಷದಂತೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹600 ಹೆಚ್ಚಳವಾಗಿ, ₹1,00,770 ಆಗಿದೆ. ಆಭರಣ ಚಿನ್ನದ ಬೆಲೆ (ಶೇ 99.5 ಪರಿಶುದ್ಧತೆ) ₹500 ಏರಿಕೆಯಾಗಿ, ₹1,00,400 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯವು ಇಳಿಕೆಯಾಗಿರುವುದು ಮತ್ತು ಅಮೆರಿಕದ ಸುಂಕ ಹೆಚ್ಚಳದ ನಿರ್ಧಾರವು ಚಿನ್ನದ ದರ ಏರಿಕೆಗೆ ಕಾರಣವಾಗಿದೆ ಎಂದು ತಿಳಿಸಿದೆ.

ADVERTISEMENT

‘ಅಮೆರಿಕದ ಫೆಡರಲ್‌ ರಿಸರ್ವ್‌ನ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ಯಾಂಕ್‌ನ ಗವರ್ನರ್ ಲಿಸಾ ಕುಕ್ ಅವರನ್ನು ಕೆಲಸದಿಂದ ವಜಾಗೊಳಿಸುವ ನಿರ್ಧಾರವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತೆಗೆದುಕೊಂಡಿದ್ದಾರೆ. ಇದರಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನದ ಮೇಲೆ ಹಣ ತೊಡಗಿಸಲು ಮುಂದಾಗಿದ್ದರಿಂದ ಹಳದಿ ಲೋಹದ ದರವು ಏರಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.