
ನವದೆಹಲಿ /ಬೆಂಗಳೂರು: ಬೆಂಗಳೂರಿನ ರಿಟೇಲ್ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಕೆ.ಜಿ ಬೆಳ್ಳಿ ಧಾರಣೆ ₹2.06 ಲಕ್ಷದಂತೆ ಮಾರಾಟವಾಗಿದೆ.
ಬೆಂಗಳೂರಿನ ಸಗಟು ಮಾರುಕಟ್ಟೆಯಲ್ಲಿ ಬೆಳ್ಳಿ ದರವು ಕೆ.ಜಿ ₹2 ಲಕ್ಷವಿದೆ ಎಂದು ಬೆಂಗಳೂರು ಜ್ಯುವೆಲರ್ಸ್ ಅಸೋಸಿಯೇಷನ್‌ನ ಕಾರ್ಯದರ್ಶಿ ಆರ್. ಶ್ರೀನಿವಾಸ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. ಇದೇ ಅಕ್ಟೋಬರ್ 15ರಂದು ಬೆಳ್ಳಿ ಧಾರಣೆ ಇದೇ ಮಟ್ಟಕ್ಕೆ ತಲುಪಿತ್ತು.
ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬೆಳ್ಳಿ ದರವು ಕೆ.ಜಿಗೆ ₹5,100 ಹೆಚ್ಚಳವಾಗಿ, ₹1,99,500ರಂತೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ₹1,110 ಏರಿಕೆಯಾಗಿ, ₹1,33,600 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ರೂಪಾಯಿ ಮೌಲ್ಯ ಇಳಿಕೆ ಮತ್ತು ಬೆಳ್ಳಿಯಲ್ಲಿ ಹೆಚ್ಚುತ್ತಿರುವ ನಿರಂತರ ಹೂಡಿಕೆಯು ಬೆಳ್ಳಿ ದರ ಏರಿಕೆಗೆ ಕಾರಣ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.