ADVERTISEMENT

ಸುಗಮ ಸೇವೆ: ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್‌ ಸೂಚನೆ

ಪಿಟಿಐ
Published 9 ಮೇ 2025, 16:02 IST
Last Updated 9 ಮೇ 2025, 16:02 IST
ನಿರ್ಮಲಾ ಸೀತಾರಾಮನ್‌ –ಪಿಟಿಐ ಚಿತ್ರ
ನಿರ್ಮಲಾ ಸೀತಾರಾಮನ್‌ –ಪಿಟಿಐ ಚಿತ್ರ   

ನವದೆಹಲಿ: ‘ಭಾರತ ಮತ್ತು ಪಾಕಿಸ್ತಾನದ ಸಂಘರ್ಷದ ನಡುವೆ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಅಥವಾ ಬಿಕ್ಕಟ್ಟು ತಲೆದೋರದಂತೆ ಬ್ಯಾಂಕ್‌ಗಳು ಮುಂಜಾಗ್ರತೆವಹಿಸಬೇಕಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೂಚಿಸಿದ್ದಾರೆ.

ಶುಕ್ರವಾರ ಸರ್ಕಾರಿ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಒಇಗಳು,  ವಿಮಾ ಕಂಪನಿಗಳ ಮುಖ್ಯಸ್ಥರು ಸೇರಿ ಪ್ರಮುಖ ಹಣಕಾಸು ಸಂಸ್ಥೆಗಳ ಮುಖ್ಯಸ್ಥರೊಟ್ಟಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬ್ಯಾಂಕಿಂಗ್‌ ವಲಯದ ಕಾರ್ಯಾಚರಣೆ ಮತ್ತು ಸೈಬರ್‌ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ಸೈಬರ್‌ ಭದ್ರತೆಗೆ ಹೆಚ್ಚಿನ ಒತ್ತು ನೀಡಬೇಕು. ಇಂಟರ್‌ನೆಟ್‌ ಬ್ಯಾಂಕಿಂಗ್‌, ಯುಪಿಐ ಸೇವೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಸೂಚಿಸಿದರು.

ADVERTISEMENT

ಬ್ಯಾಂಕಿಂಗ್‌ ವ್ಯವಸ್ಥೆಯ ಭೌತಿಕ ಮತ್ತು ಡಿಜಿಟಲ್‌ ಸೇವೆಯಲ್ಲಿ ತೊಂದರೆಯಾಗದಂತೆ ಜಾಗ್ರತೆವಹಿಸಬೇಕಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ ಸೇರಿ ಸರ್ಕಾರದ ಏಜೆನ್ಸಿಗಳೊಟ್ಟಿಗೆ ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಬೇಕಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.