ADVERTISEMENT

ಕೊರೊನೋತ್ತರ ಆರ್ಥಿಕ ಚೇತರಿಕೆ: ವಿಶ್ವಬ್ಯಾಂಕ್‌ ಅಧ್ಯಕ್ಷರ ಜೊತೆ ನಿರ್ಮಲಾ ಚರ್ಚೆ

ಪಿಟಿಐ
Published 16 ಅಕ್ಟೋಬರ್ 2021, 14:40 IST
Last Updated 16 ಅಕ್ಟೋಬರ್ 2021, 14:40 IST
ನಿರ್ಮಲಾ ಸೀತಾರಾಮನ್‌ –ಪಿಟಿಐ ಚಿತ್ರ
ನಿರ್ಮಲಾ ಸೀತಾರಾಮನ್‌ –ಪಿಟಿಐ ಚಿತ್ರ   

ವಾಷಿಂಗ್ಟನ್‌: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೊರೊನೋತ್ತರದ ಆರ್ಥಿಕ ಚೇತರಿಕೆ, ಕೋವಿಡ್‌ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ಪಾತ್ರ ಸೇರಿದಂತೆ ಇನ್ನೂ ಹಲವು ವಿಷಯಗಳ ಕುರಿತು ವಿಶ್ವ ಬ್ಯಾಂಕ್‌ನ ಅಧ್ಯಕ್ಷ ಡೇವಿಡ್‌ ಮಾಲ್‌ಪಾಸ್‌ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ವಾಷಿಂಗ್ಟನ್‌ ಡಿಸಿಯಲ್ಲಿ ಇರುವ ವಿಶ್ವಬ್ಯಾಂಕ್‌ನ ಮುಖ್ಯ ಕಚೇರಿಯಲ್ಲಿ ಡೇವಿಡ್‌ ಅವರನ್ನು ನಿರ್ಮಾ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋವಿಡ್‌ನ ಎರಡನೇ ಅಲೆಯನ್ನು ನಿಯಂತ್ರಿಸಲು ಭಾರತ ತೆಗೆದುಕೊಂಡ ಕ್ರಮಗಳು ಹಾಗೂ ಜಾಗತಿಕ ಮಟ್ಟದಲ್ಲಿ ಕೋವಿಡ್‌ ನಿಯಂತ್ರಿಸಲು ಭಾರತ ವಹಿಸಿದ ಪ್ರಮುಖ ಪಾತ್ರಗಳ ಕುರಿತು ಮಾಹಿತಿ ನೀಡಿದ್ದಾರೆ.

ಅಭಿವೃದ್ಧಿಗಾಗಿ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸಲು ಭಾರತಕ್ಕೆ ಸಾಲ ನೀಡುವ ಅವಕಾಶವನ್ನು ಹೆಚ್ಚಿಸಿರುವ ವಿಶ್ವ ಬ್ಯಾಂಕ್ ಸಮೂಹದ ಉಪಕ್ರಮದ ಬಗ್ಗೆ ನಿರ್ಮಲಾ ಅವರು ಇದೇ ವೇಳೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಆರ್ಥಿಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಬಿಕ್ಕಟ್ಟನ್ನು ಒಂದು ಅವಕಾಶವಾಗಿ ಪರಿವರ್ತಿಸಲು ಮತ್ತು ಸದೃಢವಾಗಿ ಹೊರಹೊಮ್ಮಲು ಗಮನಾರ್ಹವಾದ ಸಾಂಸ್ಥಿಕ ಸುಧಾರಣೆಗಳನ್ನು ಸಹ ಭಾರತ ಸರ್ಕಾರವು ತೆಗೆದುಕೊಂಡಿದೆ ಎಂದು ವಿಶ್ವಬ್ಯಾಂಕ್‌ನ ಅಧ್ಯಕ್ಷರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.