ಬೆಂಗಳೂರು: ವಿಆರ್ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರಿಗೆ ‘ಸೌತ್ ಇಂಡಿಯಾ ಬ್ಯುಸಿನೆಸ್ ಪ್ರಶಸ್ತಿ’ (ಎಸ್ಐಬಿಎ) ಸಂದಿದೆ.
ದುಬೈನಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಯುಎಇ ರಾಯಭಾರಿ ಆಗಿದ್ದ ಅಹ್ಮದ್ ಅಬ್ದುಲ್ ರೆಹಮಾನ್ ಅಲ್ಬನ್ನಾ ಅವರು ಆನಂದ ಸಂಕೇಶ್ವರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಉದ್ಯಮ, ಸಂಸ್ಕೃತಿ ಮತ್ತು ವಾಣಿಜ್ಯ ವಲಯದಲ್ಲಿ ಜಾಗತಿಕವಾಗಿ ಪ್ರಭಾವ ಬೀರಿರುವವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ವಿಆರ್ಎಲ್ ಸಂಸ್ಥೆಯನ್ನು ದೇಶದ ದೊಡ್ಡ ಸಾರಿಗೆ ಕಂಪನಿಯಾಗಿ, ಕಾರ್ಯಾಚರಣೆ ದಕ್ಷತೆಯಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಬೆಳೆಸುವಲ್ಲಿ ಆನಂದ ಸಂಕೇಶ್ವರ ಕೊಡುಗೆ ನೀಡಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರು ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.