ADVERTISEMENT

ಜಿಡಿಪಿ ಬೆಳವಣಿಗೆ ಪರಿಷ್ಕರಿಸಿದ ಎಸ್‌ಆ್ಯಂಡ್‌ಪಿ

ಪಿಟಿಐ
Published 15 ಡಿಸೆಂಬರ್ 2020, 10:44 IST
Last Updated 15 ಡಿಸೆಂಬರ್ 2020, 10:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಜಾಗತಿಕ ರೇಟಿಂಗ್ಸ್‌ ಸಂಸ್ಥೆ ಎಸ್‌ಆ್ಯಂಡ್‌ಪಿ, ಪ್ರಸಕ್ತ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಭಾರತದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆಯ ಅಂದಾಜನ್ನು ಪರಿಷ್ಕರಿಸಿದೆ.

ದೇಶದ ಆರ್ಥಿಕತೆಯು ಪ್ರಸಕ್ತ ಹಣಕಾಸು ವgರ್ಷದಲ್ಲಿ ಶೇಕಡ (–)9ರಷ್ಟು ಕುಸಿತ ಕಾಣಲಿದೆ ಎಂದು ಅದು ಈ ಹಿಂದೆ ಅಂದಾಜು ಮಾಡಿತ್ತು. ಆದರೆ, ಸದ್ಯ ಕೋವಿಡ್‌–19 ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಆಗುತ್ತಿರುವುದು ಹಾಗೂ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಳ ಆಗುತ್ತಿರುವ ಕಾರಣ ಆರ್ಥಿಕ ಕುಸಿತವು ಶೇ (–)7.7ರಷ್ಟಿರಲಿದೆ ಎಂದು ಮಂಗಳವಾರ ಹೇಳಿದೆ.

ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಆರ್ಥಿಕತೆಯು ನಿರೀಕ್ಷೆಗಿಂತಲೂ ವೇಗವಾಗಿ ಚೇತರಿಕೆ ಕಂಡಿದೆ. ಹೀಗಾಗಿ ಜಿಡಿಪಿ ಬೆಳವಣಿಗೆಯ ಮುನ್ನೋಟದಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ.

ADVERTISEMENT

ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ (–)23.9ರಷ್ಟು ಕುಸಿತ ಕಂಡಿತ್ತು. ಜುಲೈ–ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಕುಸಿತದ ಪ್ರಮಾಣ ತಗ್ಗಿದ್ದು, ಅದು ಶೇ (–)7.5ರಷ್ಟಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಶೇ 10ರಷ್ಟು ಬೆಳವಣಿಗೆ ಕಾಣಲಿದೆ ಎಂದು ಎಸ್‌ಆ್ಯಂಡ್‌ಪಿ ಅಂದಾಜು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.