ನವದೆಹಲಿ: ದೇಶದ ವಿಮಾನಯಾನ ಸಂಸ್ಥೆ ಸ್ಪೈಸ್‌ಜೆಟ್ ಜೂನ್ ತ್ರೈಮಾಸಿಕದಲ್ಲಿ ₹238 ಕೋಟಿ ನಷ್ಟ ಕಂಡಿದೆ.
ವೆಚ್ಚದ ಹೆಚ್ಚಳ ಮತ್ತು ಪ್ರಯಾಣಿಕರ ಸಂಚಾರ ಇಳಿಕೆ ಆಗಿರುವುದು ನಷ್ಟಕ್ಕೆ ಕಾರಣವಾಗಿದೆ ಎಂದು ಕಂಪನಿ ಷೇರುಪೇಟೆಗೆ ಶುಕ್ರವಾರ ತಿಳಿಸಿದೆ. ಕಳೆದ ಜೂನ್ ತ್ರೈಮಾಸಿಕದಲ್ಲಿ ಕಂಪನಿ ₹150 ಕೋಟಿ ಲಾಭ ಗಳಿಸಿತ್ತು.
ಕಳೆದ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹2,067 ಕೋಟಿ ವರಮಾನ ಗಳಿಸಿತ್ತು. ಈ ಬಾರಿ ₹1,190 ಕೋಟಿ ವರಮಾನ ಗಳಿಸಿದೆ ಎಂದು ತಿಳಿಸಿದೆ.
ಭೌಗೋಳಿಕ ರಾಜಕೀಯ ಬಿಕ್ಕಟ್ಟು, ವಿಮಾನಗಳ ಹಾರಾಟದ ಪ್ರದೇಶಕ್ಕೆ ನಿರ್ಬಂಧ, ಪೂರೈಕೆ ಸರಪಳಿಯಲ್ಲಿನ ಅಡಚಣೆಯು ನಷ್ಟಕ್ಕೆ ಕಾರಣವಾಗಿದೆ ಎಂದು ಸ್ಪೈಸ್‌ಜೆಟ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಹೇಳಿದ್ದಾರೆ. ವಿಮಾನಯಾನ ಸಂಸ್ಥೆಯು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು, ವೆಚ್ಚ ಕಡಿಮೆ ಮಾಡಲು ಮತ್ತು ಜಾಲವನ್ನು ವಿಸ್ತರಿಸಲು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.