ADVERTISEMENT

ಇಲಾನ್‌ ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್ ಜೊತೆ ಮಹಾರಾಷ್ಟ್ರ ಸರ್ಕಾರ ಒಪ್ಪಂದ

ಪಿಟಿಐ
Published 5 ನವೆಂಬರ್ 2025, 16:07 IST
Last Updated 5 ನವೆಂಬರ್ 2025, 16:07 IST
   

ಮುಂಬೈ: ಉಪಗ್ರಹ ಆಧಾರಿತ ಇಂಟರ್‌ನೆಟ್‌ ಸೇವೆ ಒದಗಿಸುವ, ಉದ್ಯಮಿ ಇಲಾನ್‌ ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ ಕಂಪನಿಯ ಜೊತೆ ಮಹಾರಾಷ್ಟ್ರ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.

ಮಹಾರಾಷ್ಟ್ರವು ಸ್ಟಾರ್‌ಲಿಂಕ್‌ ಜೊತೆಗೆ ಒಪ್ಪಂದ ಮಾಡಿಕೊಂಡ ದೇಶದ ಮೊದಲ ರಾಜ್ಯವಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಬುಧವಾರ ತಿಳಿಸಿದೆ. ಈ ಕುರಿತ ಒಪ್ಪಂದಕ್ಕೆ ಸರ್ಕಾರವು ಸ್ಟಾರ್‌ಲಿಂಕ್ ಸ್ಯಾಟ್‌ಲೈಟ್ ಕಮ್ಯುನಿಕೇಷನ್ಸ್ ಪ್ರೈವೆಟ್ ಲಿಮಿಟೆಡ್‌ನೊಂದಿಗೆ ಸಹಿ ಹಾಕಿದೆ.

‘ಈ ಒಪ್ಪಂದದಿಂದ ಉಪಗ್ರಹ ಆಧಾರಿತ ಇಂಟರ್‌ನೆಟ್‌ ಸೇವೆಯನ್ನು ಸರ್ಕಾರಿ ಸಂಸ್ಥೆಗಳು, ಗ್ರಾಮೀಣ ಪ್ರದೇಶಗಳು, ಕುಗ್ರಾಮ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಒದಗಿಸಲಾಗುವುದು’ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ADVERTISEMENT

‘ಸ್ಟಾರ್‌ಲಿಂಕ್ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ಐಸಿಟಿ) ಕ್ಷೇತ್ರದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಕಂಪನಿಯೊಂದಿಗೆ ಮಹಾರಾಷ್ಟ್ರ ಒಪ್ಪಂದ ಹೊಂದಿರುವುದು ನಮಗೆ ಗೌರವವಾಗಿದೆ’ ಎಂದು ತಿಳಿಸಿದ್ದಾರೆ.

ಈ ಸಹಯೋಗವು ಡಿಜಿಟಲ್‌ ಮಹಾರಾಷ್ಟ್ರ ಮಿಷನ್‌, ಕರಾವಳಿ ಅಭಿವೃದ್ಧಿ ಸೇರಿ ಹಲವು ಅಭಿವೃದ್ಧಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.