ADVERTISEMENT

Startup Helpline | ನವೋದ್ಯಮ ನೆರವಿಗೆ ಸಹಾಯವಾಣಿ ಸ್ಥಾಪನೆ: ಪೀಯೂಷ್‌ ಗೋಯಲ್‌

ಪಿಟಿಐ
Published 6 ಏಪ್ರಿಲ್ 2025, 14:21 IST
Last Updated 6 ಏಪ್ರಿಲ್ 2025, 14:21 IST
<div class="paragraphs"><p>ಪೀಯೂಷ್‌ ಗೋಯಲ್‌</p></div>

ಪೀಯೂಷ್‌ ಗೋಯಲ್‌

   

ನವದೆಹಲಿ (ಪಿಟಿಐ): ಕೈಗಾರಿಕಾ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ವ್ಯಾಪ್ತಿಯಲ್ಲಿ ಸ್ಟಾರ್ಟ್‌ಅಪ್‌ ಇಂಡಿಯಾ ಡೆಸ್ಕ್‌ ಸ್ಥಾಪಿಸಲಾಗುತ್ತಿದ್ದು, ಇದು ನವೋದ್ಯಮಗಳ ಸಹಾಯವಾಣಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ತಿಳಿಸಿದ್ದಾರೆ.

ನಾಲ್ಕು ಸಂಖ್ಯೆ ಒಳಗೊಂಡಿರುವ ಈ ಸಹಾಯವಾಣಿ ಮೂಲಕ ಪ್ರಾದೇಶಿಕ ಭಾಷೆಗಳಲ್ಲಿಯೂ ಸಂವಹನ ನಡೆಸಲು ಅನುಕೂಲ ಕಲ್ಪಿಸಲಾಗುವುದು. ದೇಶದಲ್ಲಿರುವ ಎಲ್ಲಾ ನವೋದ್ಯಮಗಳ ಸಮಸ್ಯೆ ಆಲಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ADVERTISEMENT

ನವೋದ್ಯಮಗಳಿಗೆ ಆರ್ಥಿಕ ನೆರವು ಕಲ್ಪಿಸಲು ಕೇಂದ್ರ ನಿರ್ಧರಿಸಿದೆ. ಇದಕ್ಕಾಗಿ ನಿಧಿಯ ನಿಧಿ ಯೋಜನೆ (ಎಫ್‌ಎಫ್‌ಎಸ್‌) ಅಡಿ ಈ ವರ್ಷ ₹10 ಸಾವಿರ ಕೋಟಿ ನಿಗದಿಪಡಿಸಲಾಗಿದೆ. ಮೊದಲ ಹಂತದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್‌ಗೆ (ಸಿಡ್ಬಿ) ₹2 ಸಾವಿರ ಕೋಟಿಯನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಣ್ಣ ಮತ್ತು ಡೀಪ್‌ಟೆಕ್‌ ನವೋದ್ಯಮಗಳ ಬಲವರ್ಧನೆಗೆ ಹೆಚ್ಚಿನ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.