
ಪಿಟಿಐ
ಭುವನೇಶ್ವರ್: ‘ದೇಶದ ಉಕ್ಕು ವಲಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ (ಆರ್ ಆ್ಯಂಡ್ ಡಿ) ಹೆಚ್ಚಿನ ಹೂಡಿಕೆ ಅಗತ್ಯವಿದೆ’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೇಶದ ಉಕ್ಕು ವಲಯದ ಒಟ್ಟಾರೆ ಬೆಳವಣಿಗೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ, ಮೆಷಿನ್ ಲರ್ನಿಂಗ್ ಮತ್ತು ಡಿಜಿಟಲೀಕರಣದಂತಹ ತಂತ್ರಜ್ಞಾನದ ಅಳವಡಿಕೆ ಅಗತ್ಯ. ಇದು ಸ್ಪರ್ಧಾತ್ಮಕತೆ ಹೆಚ್ಚಿಸಲಿದೆ ಎಂದು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುವಾರ ಹೇಳಿದ್ದಾರೆ.
ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಉಕ್ಕು ಉದ್ಯಮವು ಬೆನ್ನೆಲುಬು ಆಗಿದೆ. ಇದು ‘ವಿಕಸಿತ ಭಾರತ’ ಗುರಿ ಸಾಧನೆಗೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಕೇಂದ್ರ ಉಕ್ಕು ಖಾತೆ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.