ನವದೆಹಲಿ (ಪಿಟಿಐ): ಕೊರೊನಾದಿಂದಾಗಿ ಷೇರು ದಲ್ಲಾಳಿಗಳಿಗೂ ಏಪ್ರಿಲ್ 30ರವರೆಗೆ ಮನೆಯಿಂದಲೇ ಕೆಲಸ ಮಾಡಲು ಮುಂಬೈ ಮತ್ತು ರಾಷ್ಟ್ರೀಯ ಷೇರುಪೇಟೆಗಳು ಅನುಮತಿ ನೀಡಿವೆ.
ಅಕ್ರಮ ವಹಿವಾಟು ತಡೆಯಲು ಕೆಲವೊಂದು ನಿಯಮಗಳನ್ನು ಪಾಲಿಸುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ಷೇರುಪೇಟೆಗಳು ತಿಳಿಸಿವೆ. ದಲ್ಲಾಳಿಗಳಿಗೆ ಈ ರೀತಿಯ ವ್ಯವಸ್ಥೆ ಕಲ್ಪಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಮಾರುಕಟ್ಟೆ ತಜ್ಞರು
ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.