ADVERTISEMENT

ಚೇತರಿಸಿಕೊಳ್ಳದ ಷೇರುಪೇಟೆ ವಹಿವಾಟು

ಹೂಡಿಕೆದಾರರ ಸಂಪತ್ತು ₹ 2 ಲಕ್ಷ ಕೋಟಿ ಕರಗಿದೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2019, 20:07 IST
Last Updated 27 ಜುಲೈ 2019, 20:07 IST
   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಬಜೆಟ್‌ನ ನಕಾರಾತ್ಮಕ ಪರಿಣಾಮ ಮುಂದುವರಿದಿದೆ. ವಾರದಿಂದ ವಾರಕ್ಕೆ ಹೂಡಿಕೆದಾರರ ಸಂಪತ್ತು ಮೌಲ್ಯ ಕರಗುತ್ತಲೇ ಇದೆ.

ವಾರದ ವಹಿವಾಟಿನಲ್ಲಿ, ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 2 ಲಕ್ಷ ಕೋಟಿಗಳಷ್ಟು ಕರಗಿದೆ. ಷೇರುಪೇಟೆಯ ಬಂಡವಾಳ ಮೌಲ್ಯ ₹ 143 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ. ಕೇಂದ್ರ ಬಜೆಟ್‌ ಮಂಡನೆಯಾದ ಬಳಿಕ ಜುಲೈ 26ರವರೆಗೆ ಹೂಡಿಕೆದಾರರ ಸಂಪತ್ತು ಮೌಲ್ಯದಲ್ಲಿ ₹ 8 ಲಕ್ಷ ಕೋಟಿಗಳಷ್ಟು ಕರಗಿದೆ.

ಮುಂಬೈ ಷೇರುಪೇಟೆ ಸೂಚ್ಯಂಕದ (ಬಿಎಸ್‌ಇ) ವಾರದ ವಹಿವಾಟಿನಲ್ಲಿ ಸೂಚ್ಯಂಕ 454 ಅಂಶ ಇಳಿಕೆಯಾಗಿ 37,882 ಅಂಶಗಳಿಗೆ ತಲುಪಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹ 4,129 ಕೋಟಿಗೂ ಅಧಿಕ ಮೌಲ್ಯದ ಷೇರುಗಳನ್ನು ಮಾರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.