ADVERTISEMENT

ಷೇರುಪೇಟೆ ಸೂಚ್ಯಂಕ ಇಳಿಕೆ

ಪಿಟಿಐ
Published 12 ಮೇ 2020, 19:45 IST
Last Updated 12 ಮೇ 2020, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಮಂಗಳವಾರ ಚಂಚಲ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ ಆರಂಭದಲ್ಲಿ 716 ಅಂಶಗಳಷ್ಟು ಕುಸಿತ ಕಂಡಿತ್ತು. ನಂತರ ಚೇತರಿಕೆ ಹಾದಿಗೆ ಮರಳಿತು. ಅಂತಿಮವಾಗಿ 190 ಅಂಶಗಳ ಇಳಿಕೆಯೊಂದಿಗೆ 31,371 ಅಂಶಗಳಿಗೆ ತಲುಪಿತು.

ಬಿಎಸ್‌ಇ ಮಧ್ಯಮ ಮತ್ತು ಸಣ್ಣ ಶ್ರೇಣಿಯ ಸೂಚ್ಯಂಕಗಳು ಶೇ 0.75ರಷ್ಟು ಇಳಿಕೆ ಕಂಡಿವೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 43 ಅಂಶ ಇಳಿಕೆ ಕಂಡು 9,196ಕ್ಕೆ ತಲುಪಿತು.

ರಿಲಯನ್ಸ್‌ ಇಂಡಸ್ಟ್ರೀಸ್‌ ಶೇ 6ರಷ್ಟು ಗರಿಷ್ಠ ಕುಸಿತ ಕಂಡಿತು.

ರೂಪಾಯಿ ಚೇತರಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 22 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 75.51ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.