
ಮುಂಬೈ: ಲಾಭ ಗಳಿಕೆಗಾಗಿ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಶುಕ್ರವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.
ಅಮೆರಿಕದ ಫೆಡರಲ್ ರಿಸರ್ವ್, ಡಿಸೆಂಬರ್‌ನಲ್ಲಿ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ ಕಡಿಮೆ ಆಗಿದೆ. ಇದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಆಗಿವೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 400 ಅಂಶ ಇಳಿಕೆಯಾಗಿ, 85,231ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 124 ಅಂಶ ಕಡಿಮೆಯಾಗಿ, 26,068ಕ್ಕೆ ಕೊನೆಗೊಂಡಿದೆ.
ಟಾಟಾ ಸ್ಟೀಲ್, ಎಚ್‌ಸಿಎಲ್ ಟೆಕ್, ಬಜಾಜ್ ಫೈನಾನ್ಸ್, ಬಜಾಜ್ ಫಿನ್‌ಸರ್ವ್, ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಎಟರ್ನಲ್ ಷೇರಿನ ಮೌಲ್ಯದಲ್ಲಿ ಇಳಿಕೆ ಆಗಿದೆ. ಮಾರುತಿ ಸುಜುಕಿ ಇಂಡಿಯಾ, ಮಹೀಂದ್ರ ಆ್ಯಂಡ್ ಮಹೀಂದ್ರ, ಟಾಟಾ ಮೋಟರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಮತ್ತು ಐಟಿಸಿ ಷೇರಿನ ಮೌಲ್ಯದಲ್ಲಿ ಹೆಚ್ಚಳವಾಗಿದೆ.
ಏಷ್ಯಾದ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ, ಶಾಂಘೈ, ಜಪಾನ್ ಮತ್ತು ಹಾಂಗ್‌ಕಾಂಗ್ ನಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 1.51ರಷ್ಟು ಇಳಿಕೆ ಆಗಿದೆ. ಪ್ರತೀ ಬ್ಯಾರಲ್ ದರವು 62.42 ಡಾಲರ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.