ADVERTISEMENT

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 18 ಪೈಸೆ ಕುಸಿತ

ಪಿಟಿಐ
Published 20 ನವೆಂಬರ್ 2025, 4:38 IST
Last Updated 20 ನವೆಂಬರ್ 2025, 4:38 IST
<div class="paragraphs"><p> ರೂಪಾಯಿ ಮೌಲ್ಯ ಕುಸಿತ </p></div>

ರೂಪಾಯಿ ಮೌಲ್ಯ ಕುಸಿತ

   

Credit: iStock Photo

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಗುರುವಾರ ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 18 ಪೈಸೆ ಕುಸಿದಿದೆ. ಪ್ರತೀ ಡಾಲರ್ ಎದುರು ರೂಪಾಯಿ ಬೆಲೆ ₹88.66ರಷ್ಟಿದೆ.

ADVERTISEMENT

ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆಯ ಹೊರತಾಗಿಯೂ ವಿದೇಶಿ ಬಂಡವಾಳದ ನಿರಂತರ ಹೊರಹರಿವು, ಜಾಗತಿಕ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಮೌಲ್ಯ ಮತ್ತು ಕಚ್ಚಾ ತೈಲ ದರ ಏರಿಕೆಯಾಗಿರುವುದು ರೂಪಾಯಿ ಮೌಲ್ಯ ಕುಸಿದಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಬುಧವಾರ 12 ಪೈಸೆ ಏರಿಕೆ ಕಂಡು ₹88.48ಕ್ಕೆ ಮುಕ್ತಾಯಗೊಂಡಿತ್ತು.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.28ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರಲ್ ದರವು 63.69 ಡಾಲರ್ ಆಗಿದೆ.

ಸೆನ್ಸೆಕ್ಸ್ 284 ಅಂಶ ಏರಿಕೆ

ಮುಂಬೈ: ದೇಶದ ಷೇರುಪೇಟೆ ಸೂಚ್ಯಂಕಗಳು ಇಂದು (ಗುರುವಾರ) ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 284 ಅಂಶ ಏರಿಕೆಯಾಗಿ, 85,470ಕ್ಕೆ ತಲುಪಿವೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 83 ಅಂಶ ಏರಿಕೆಯಾಗಿ, 26,136ಕ್ಕೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.