ADVERTISEMENT

ಷೇರು ಸೂಚ್ಯಂಕಗಳು ಏರಿಕೆ

ಪಿಟಿಐ
Published 18 ಮಾರ್ಚ್ 2024, 16:05 IST
Last Updated 18 ಮಾರ್ಚ್ 2024, 16:05 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್‌ ಮತ್ತು ನಿಫ್ಟಿ ಸೋಮವಾರ ಏರಿಕೆ ಕಂಡಿವೆ. 

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್‌ 104 ಅಂಶ ಏರಿಕೆಯಾಗಿ 72,748ಕ್ಕೆ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 32 ಅಂಶ ಹೆಚ್ಚಳವಾಗಿ 22,055ಕ್ಕೆ ಕೊನೆಗೊಂಡಿತು. 

ಟಾಟಾ ಸ್ಟೀಲ್‌, ಮಹೀಂದ್ರ ಆ್ಯಂಡ್‌ ಮಹೀಂದ್ರ, ಜೆಎಸ್‌ಡಬ್ಲ್ಯು ಸ್ಟೀಲ್‌, ಟಾಟಾ ಮೋಟರ್ಸ್‌, ಎಕ್ಸಿಸ್‌ ಬ್ಯಾಂಕ್‌, ಸನ್‌ಫಾರ್ಮಾ, ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಮಾರುತಿ ಕಂಪನಿಗಳ ಷೇರಿನ ಮೌಲ್ಯ ಏರಿಕೆ ಆಗಿದೆ. ಅದಾನಿ ಸಮೂಹದ ಎಲ್ಲ ಕಂಪನಿಗಳು, ಇನ್ಫೊಸಿಸ್‌, ಟಿಸಿಎಸ್‌, ಟೈಟನ್‌, ವಿಪ್ರೊ, ಹಿಂದುಸ್ತಾನ್‌ ಯೂನಿಲಿವರ್‌ ಮತ್ತು ನೆಸ್ಲೆ ಷೇರಿನ ಮೌಲ್ಯ ಇಳಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.