ADVERTISEMENT

100 ರೈಲು ನಿಲ್ದಾಣಕ್ಕೆ ಸ್ವಿಗ್ಗಿ ಆಹಾರ ಪೂರೈಕೆ

ಪಿಟಿಐ
Published 7 ಮಾರ್ಚ್ 2025, 14:43 IST
Last Updated 7 ಮಾರ್ಚ್ 2025, 14:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ (ಐಆರ್‌ಸಿಟಿಸಿ) ಪಾಲುದಾರಿಕೆಯಲ್ಲಿ ಸ್ವಿಗ್ಗಿ ಕಂಪನಿಯು, ದೇಶದ 100 ರೈಲು ನಿಲ್ದಾಣಗಳಿಗೆ ಆಹಾರ ಪೂರೈಕೆ ಮಾಡಲಿದೆ.

ಪ್ರಸ್ತುತ ಈ ಸೇವೆಯ ವಿಸ್ತರಣೆಯಿಂದ ದೇಶದ 20 ರಾಜ್ಯಗಳಲ್ಲಿರುವ ನಿಲ್ದಾಣಗಳಿಗೆ ಆಹಾರ ಪೂರೈಕೆ ಸೌಲಭ್ಯ ಕಲ್ಪಿಸಲಿದೆ. ಮುಂಬರುವ ತಿಂಗಳುಗಳಲ್ಲಿ ಈ ಸೇವೆ ಆರಂಭಿಸಲಾಗುವುದು ಎಂದು ಸ್ವಿಗ್ಗಿ ತಿಳಿಸಿದೆ.

ರೈಲು ಪ್ರಯಾಣಿಕರಿಗೆ ಆಹಾರ ಪೂರೈಕೆ ಮಾಡಲು ಕಳೆದ ವರ್ಷದ ಮಾರ್ಚ್‌ನಲ್ಲಿ ಐಆರ್‌ಸಿಟಿಸಿ ಜೊತೆಗೆ ಸ್ವಿಗ್ಗಿ ಒಪ್ಪಂದ ಮಾಡಿಕೊಂಡಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.