ADVERTISEMENT

ಸಿಂಡಿಕೇಟ್‌ ಬ್ಯಾಂಕ್ ನಷ್ಟ ಇಳಿಕೆ

ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 19:45 IST
Last Updated 24 ಜುಲೈ 2019, 19:45 IST
ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಎಸ್‌. ಕೃಷ್ಣನ್, ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್ವರ ರಾವ್ ಅವರು ತ್ರೈಮಾಸಿಕ ಫಲಿತಾಂಶದ ವಿವರ ನೀಡಿದರು  –ಪ್ರಜಾವಾಣಿ ಚಿತ್ರ
ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಎಸ್‌. ಕೃಷ್ಣನ್, ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್ವರ ರಾವ್ ಅವರು ತ್ರೈಮಾಸಿಕ ಫಲಿತಾಂಶದ ವಿವರ ನೀಡಿದರು  –ಪ್ರಜಾವಾಣಿ ಚಿತ್ರ   

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಿಂಡಿಕೇಟ್‌ ಬ್ಯಾಂಕ್‌, ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 980 ಕೋಟಿ ನಷ್ಟ ಅನುಭವಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿನ ನಷ್ಟ ₹ 1,281 ಕೋಟಿ ಇತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ನಷ್ಟದಲ್ಲಿ ಇಳಿಕೆಯಾಗಿದೆ.

‘ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತದ ಪ್ರಮಾಣ ಶೇ 63.04 ರಿಂದ ಶೇ 69.02ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ನಷ್ಟ ಕಾಣುವಂತಾಗಿದೆ’ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ADVERTISEMENT

‘ಆಸ್ತಿ ಗುಣಮಟ್ಟದಲ್ಲಿಯೂ ಸುಧಾರಣೆ ಕಂಡು ಬಂದಿದೆ.ವಸೂಲಾಗದ ನಿವ್ವಳ ಸಾಲದ ಪ್ರಮಾಣ (ಎನ್‌ಪಿಎ) ಶೇ 6.64ರಿಂದ ಶೇ 5.06ಕ್ಕೆ ಇಳಿಕೆಯಾಗಿದೆ.

‘ತ್ರೈಮಾಸಿಕದಲ್ಲಿ ಒಟ್ಟಾರೆ ವರಮಾನವು ₹ 5,637 ಕೋಟಿಗಳಿಂದ ₹ 6,089ಕೋಟಿಗಳಿಗೆ ಏರಿಕೆಯಾಗಿದೆ.

‘ರಾಷ್ಟ್ರೀಯ ಕಂಪನಿ ಕಾಯ್ದೆ ಪ್ರಾಧಿಕಾರದ (ಎನ್‌ಸಿಎಲ್‌ಟಿ) ಮೂಲಕ ಹಣಕಾಸು ವರ್ಷದಲ್ಲಿ ₹ 1,000 ಕೋಟಿಯಿಂದ ₹ 1,500 ಕೋಟಿ ಮೊತ್ತದ ಸಾಲ ವಸೂಲಿಯಾಗುವ ನಿರೀಕ್ಷೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.