ನವದೆಹಲಿ: ನವರಾತ್ರಿಯಿಂದ ದೀಪಾವಳಿಯವರಿಗಿನ ಅವಧಿಯಲ್ಲಿ 1 ಲಕ್ಷಕ್ಕೂ ಅಧಿಕ ಪ್ರಯಾಣಿಕ ವಾಹನಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ ಎಂದು ಟಾಟಾ ಮೋಟರ್ಸ್ ತಿಳಿಸಿದೆ.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಮಾರಾಟ ಪ್ರಮಾಣದಲ್ಲಿ ಶೇ 33ರಷ್ಟು ಹೆಚ್ಚಳವಾಗಿದೆ ಎಂದು ಮಂಗಳವಾರ ತಿಳಿಸಿದೆ.
‘ಎಸ್‌ಯುವಿ ಮತ್ತು ವಿದ್ಯುತ್‌ಚಾಲಿತ ವಾಹನಗಳ ಮಾರಾಟದ ಹೆಚ್ಚಳದಿಂದ ಒಟ್ಟಾರೆ ಮಾರಾಟದ ಪ್ರಮಾಣ ಏರಿಕೆ ಆಗಿದೆ’ ಎಂದು ಟಾಟಾ ಮೋಟರ್ಸ್‌ನ ಪ್ರಯಾಣಿಕ ವಾಹನದ (ಟಿಎಂಪಿವಿ) ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಶೈಲೇಶ್ ಚಂದ್ರ ಹೇಳಿದ್ದಾರೆ.
30 ದಿನದ ಅವಧಿಯಲ್ಲಿ 1 ಲಕ್ಷಕ್ಕೂ ಹೆಚ್ಚು ವಾಹನಗಳು ಮಾರಾಟವಾಗಿವೆ. ಇದು ಮಹತ್ವದ ಮೈಲಿಗಲ್ಲು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.