ನವದೆಹಲಿ: 2024-25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿ ಟಾಟಾ ಮೋಟರ್ಸ್‌ನ ನಿವ್ವಳ ಲಾಭದಲ್ಲಿ ಶೇ 51ರಷ್ಟು ಇಳಿಕೆಯಾಗಿದೆ.
ಈ ತ್ರೈಮಾಸಿಕದಲ್ಲಿ ₹8,556 ಕೋಟಿ ನಿವ್ವಳ ಲಾಭ ಗಳಿಸಿದೆ. 2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹17,528 ಕೋಟಿ ಲಾಭ ಗಳಿಸಿತ್ತು. ವಾಹನಗಳ ಮಾರಾಟದಲ್ಲಿ ಇಳಿಕೆಯಾಗಿರುವುದು ಮತ್ತು ವರಮಾನದಲ್ಲಿ ಕಡಿಮೆ ಆಗಿರುವುದೇ ಲಾಭದ ಪ್ರಮಾಣ ಇಳಿಕೆಗೆ ಕಾರಣ ಎಂದು ಕಂಪನಿಯು ಮಂಗಳವಾರ ಷೇರುಪೇಟೆಗೆ ತಿಳಿಸಿದೆ.
2024–25ನೇ ಪೂರ್ಣ ಆರ್ಥಿಕ ವರ್ಷದಲ್ಲಿ ₹28,149 ಕೋಟಿ ನಿವ್ವಳ ಲಾಭ ಗಳಿಸಿದೆ. ಒಟ್ಟು ವರಮಾನ ₹4.39 ಲಕ್ಷ ಕೋಟಿ ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.