ಬೆಂಗಳೂರು: ದೇಶದ ಮುಂಚೂಣಿ ವಾಹನ ತಯಾರಿಕಾ ಕಂಪನಿ ಟಾಟಾ ಮೋಟರ್ಸ್ 25 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿರುವುದಾಗಿ ಹೇಳಿದೆ.
ಬೆಂಗಳೂರು, ದೆಹಲಿ–ಎನ್‌ಸಿಆರ್, ಮುಂಬೈ, ಚೆನ್ನೈ, ಹೈದರಾಬಾದ್ ಸೇರಿ 150ಕ್ಕೂ ಹೆಚ್ಚು ನಗರಗಳಲ್ಲಿ ಈ ಜಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದ್ಯುತ್ ಚಾಲಿತ ಸಣ್ಣ ವಾಣಿಜ್ಯ ವಾಹನಗಳನ್ನು (ಎಸ್‌ಸಿವಿ) ಹೊಂದಿರುವ ಗ್ರಾಹಕರಿಗೆ ಇದರಿಂದ ಹೆಚ್ಚು ಅನುಕೂಲ ಆಗಲಿದೆ ಎಂದು ಕಂಪನಿ ಹೇಳಿದೆ.
ಮುಂದಿನ 12 ತಿಂಗಳಿನಲ್ಲಿ 25 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸಲು 13 ಚಾರ್ಜಿಂಗ್ ಪಾಯಿಂಟ್ ಆಪರೇಟರ್‌ಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.