ADVERTISEMENT

ಟಾಟಾ ಸನ್ಸ್ ಅಧ್ಯಕ್ಷರಾಗಿ ಚಂದ್ರಶೇಖರನ್‌ ಮರು ನೇಮಕ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2022, 10:53 IST
Last Updated 11 ಫೆಬ್ರುವರಿ 2022, 10:53 IST
ಎನ್‌. ಚಂದ್ರಶೇಖರನ್
ಎನ್‌. ಚಂದ್ರಶೇಖರನ್   

ಬೆಂಗಳೂರು: ಟಾಟಾ ಸನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಎನ್‌. ಚಂದ್ರಶೇಖರನ್‌ ಅವರನ್ನು ಮುಂದಿನ ಐದು ವರ್ಷಗಳ ಅವಧಿಗೆ ಮರು ನೇಮಕ ಮಾಡಲಾಗಿದೆ.

ಶುಕ್ರವಾರ ನಡೆದ ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರತನ್ ಟಾಟಾ ಅವರು ವಿಶೇಷ ಆಹ್ವಾನಿತರಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ, ಚಂದ್ರಶೇಖರನ್‌ ಅವರ ನೇತೃತ್ವದಲ್ಲಿ ಟಾಟಾ ಸಮೂಹದ ಪ್ರಗತಿ ಮತ್ತು ಸಾಧನೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿರುವ ಅವರು, ಚಂದ್ರಶೇಖರನ್‌ ಅವರ ಅಧಿಕಾರಾವಧಿಯನ್ನು ಇನ್ನೂ ಐದು ವರ್ಷಗಳ ಅವಧಿಗೆ ವಿಸ್ತರಿಸುವಂತೆ ಶಿಫಾರಸು ಮಾಡಿದರು ಎಂದು ಟಾಟಾ ಸನ್ಸ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಐದು ವರ್ಷಗಳಿಂದ ಟಾಟಾ ಸಮೂಹವನ್ನು ಮುನ್ನಡೆಸುವುದು ಒಂದು ಹೆಮ್ಮೆಯ ವಿಷಯ. ಮುಂದಿನ ಹಂತದಲ್ಲಿ ಇನ್ನೂ ಐದು ವರ್ಷಗಳ ಕಾಲ ಸಮೂಹವನ್ನು ಮುನ್ನಡೆಸುವ ಅವಕಾಶ ದೊರೆತಿರುವುದಕ್ಕೆ ಸಂತೋಷಪಡುತ್ತೇನೆ ಎಂದು ಚಂದ್ರಶೇಖರನ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.