
ಪಿಟಿಐ
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಟಾಟಾ ಸ್ಟೀಲ್ ಕಂಪನಿಯು ₹2,730 ಕೋಟಿ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹295 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಹಲವು ಪಟ್ಟು ಹೆಚ್ಚಳವಾಗಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.
ಕಂಪನಿಯ ಒಟ್ಟು ವರಮಾನವು ₹53,869 ಕೋಟಿಯಿಂದ ₹57,503 ಕೋಟಿಗೆ ಹೆಚ್ಚಳವಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.